... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ-30,000 ಕೋಟಿ ರು. ವಿತರಣೆಯ ಗುರಿ

38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ-30,000 ಕೋಟಿ ರು. ವಿತರಣೆಯ ಗುರಿ

ಪ್ರಾಕೃತಿಕ ವೈಪರೀತ್ಯಗಳಿಂದ ಸಂಕಷ್ಟಕ್ಕೆ ಸಿಲುಕುವ ರೈತರಿಗೆ ಸರ್ಕಾರ ಈ ಬಾರಿ ಉದಾರವಾಗಿ ‘ಆರ್ಥಿಕ’ ಸಹಕಾರ ನೀಡಿದೆ. ಅದರಂತೆ ಈ ಹಣಕಾಸು ವರ್ಷದಲ್ಲಿ ಸಹಕಾರ ಇಲಾಖೆಗೆ 38 ಲಕ್ಷ ಕೃಷಿಕರಿಗೆ 30 ಸಾವಿರ ಕೋಟಿ ರು. ಶೂನ್ಯ ಬಡ್ಡಿಯಲ್ಲಿ ಕೃಷಿ ಸಾಲ ವಿತರಿಸುವ ಗುರಿ ವಹಿಸಿದೆ. ಇದರ ಜತೆಗೆ ಮೆಕ್ಕಜೋಳ ಬೆಲೆ ಕುಸಿತದಿಂದ ಕಂಗಲಾದ ಬೆಳಗಾರರ ನೋವಿಗೆ ಮಿಡಿದ ಸರ್ಕಾರವು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮೆಕ್ಕೆಜೋಳ ಖರೀದಿಸಲು 100 ಕೋಟಿ ರು. ನೆರವು ಘೋಷಿಸಿದೆ. 

 ಉಗ್ರಾಣ ನಿಗಮಕ್ಕೆ ಆರ್ಥಿಕವಾಗಿ ಚೈತನ್ಯ ಉಗ್ರಾಣ ನಿಗಮಕ್ಕೆ ಆರ್ಥಿಕವಾಗಿ ಚೈತನ್ಯ ನೀಡಲು ಆ ನಿಗಮದ ಅನುಪಯುಕ್ತ ಆಸ್ತಿಗಳನ್ನು ನಗದೀಕರಣಗೊಳಿಸಲು ಉದ್ದೇಶಿಸಿದೆ. ಅಂತೆಯೇ ಪ್ರಸಕ್ತ ಸಾಲಿನಲ್ಲಿ ಮೈಸೂರು (ಬಂಬೂ ಬಜಾರ್‌) ಮತ್ತು ಹುಬ್ಬಳ್ಳಿ (ಕಾಟನ್‌ ಮಾರ್ಕೆಟ್‌) ಕೇಂದ್ರಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡುವ ಘೋಷಣೆ ಮಾಡಿದೆ. ಸಹಕಾರ ಆಡಳಿತಕ್ಕೆ ಈ ಬಾರಿಯ ಆಯವ್ಯಯದಲ್ಲಿ ತಾಂತ್ರಿಕ ಸ್ಪರ್ಶ ನೀಡಲಾಗಿದೆ. 

ಈ ವರ್ಷ 1,628 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಪಿಎಸಿಎಸ್‌) ಗಳನ್ನು ಸಂಪೂರ್ಣ ಗಣಕೀಕರಣಕ್ಕೆ ಉದ್ದೇಶಿಸಿದೆ. ಹಾಗೆಯೇ ಎಪಿಎಂಸಿಗಳ ಕಾರ್ಯಚಟುವಟಿಕೆಗಳ ಡಿಜಿಟಲೀಕರಣಕ್ಕೆ 10 ಕೋಟಿ ರು. ವೆಚ್ಚದ ಯೋಜನೆಯನ್ನು ಸರ್ಕಾರ ರೂಪಿಸಿದೆ. ಇನ್ನು ಸಹಕಾರ ಸಂಘಗಳ ನಿಬಂಧಕರ ಹಂತದಲ್ಲಿ ವಿವಿಧ ಸೇವೆಗಳನ್ನು ಸುಲಭವಾಗಿ ಒದಗಿಸಲು ದತ್ತಾಂಶವನ್ನು ಆನ್‌ಲೈನ್‌ನಲ್ಲಿ ನಿರ್ವಹಿಸಲು ಸರ್ಕಾರ ತೀರ್ಮಾನಿಸಿದೆ.

Source : Kannadapraba

1 hour ago

Home Flash News