... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಕೊರತೆ:

ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಕೊರತೆ: ತೇಜಸ್ವಿ ಸೂರ್ಯ ಮಧ್ಯ ಪ್ರವೇಶ!

ಬೆಂಗಳೂರಿನಲ್ಲಿ ವಾಣಿಜ್ಯ LPG ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮ ಆತಂಕದಲ್ಲಿದೆ. ಹಲವು ಹೋಟೆಲ್‌ಗಳು ಮುಚ್ಚುವ ಭೀತಿ ಎದುರಿಸುತ್ತಿವೆ. ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಸಂಸದ ತೇಜಸ್ವಿ ಸೂರ್ಯ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದಿದ್ದಾರೆ. LPG ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರು, ಮಾರ್ಚ್​ 10: ನಗರದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ (LPG Cylinder Shortage) ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಹೋಟೆಲ್ ಉದ್ಯಮದಲ್ಲಿ ಆತಂಕ ವ್ಯಕ್ತವಾಗಿದೆ.

 ಈ ಹಿನ್ನೆಲೆ ನಗರದ ಹಲವು ಹೋಟೆಲ್‌ಗಳು ಮುಚ್ಚುವ ಸಾಧ್ಯತೆ ಹೆಚ್ಚಿದ್ದು, ಈ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಮನವಿ ಸಲ್ಲಿಸಿದೆ. ಈ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ. ಹೋಟೆಲ್ ಹಾಗೂ ಆತಿಥ್ಯ ಕ್ಷೇತ್ರಕ್ಕೆ ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸುವಂತೆ ಮನವಿ ಮಾಡಿ ಟ್ವೀಟ್ ಮಾಡಿರುವ ಸಂಸದ ಸೂರ್ಯ, ಹೋಟೆಲ್ ಮತ್ತು ರೆಸ್ಟೋರೆಂಟ್ ಕ್ಷೇತ್ರವು ದಿನನಿತ್ಯದ ಅಡುಗೆ ಕಾರ್ಯಗಳಿಗೆ ಬಹುಪಾಲು ವಾಣಿಜ್ಯ ಎಲ್‌ಪಿಜಿ ಮೇಲೆಯೇ ಅವಲಂಬಿತವಾಗಿದೆ. 

ಪಿಎನ್‌ಜಿ ಸಂಪರ್ಕ ಅಥವಾ ವಿದ್ಯುತ್ ಆಧಾರಿತ ಅಡುಗೆ ವ್ಯವಸ್ಥೆಗಳು ಇನ್ನೂ ವ್ಯಾಪಕವಾಗಿ ಲಭ್ಯವಿಲ್ಲದ ಕಾರಣ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ಹೋಟೆಲ್ ಉದ್ಯಮ, ಉದ್ಯೋಗ ಹಾಗೂ ಗ್ರಾಹಕರ ಸೇವೆಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Source : TV9 Kannada

1 hour ago

Home Flash News