... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
By-Election: ಬಿಜೆಪಿ, ಕಾಂಗ್ರೆಸ್​​ಗೆ ಬಿಗ್​ ಶಾಕ್​;

By-Election: ಬಿಜೆಪಿ, ಕಾಂಗ್ರೆಸ್​​ಗೆ ಬಿಗ್​ ಶಾಕ್​; ದಾವಣಗೆರೆ, ಬಾಗಲಕೋಟೆ ಉಪಚುನಾವಣೆಗೆ ಎಂಟ್ರಿ ಕೊಡಲು ಶಿವಸೇನೆ ಸಿದ್ದತೆ!

ಕರ್ನಾಟಕದ ದಾವಣಗೆರೆ (Davanagere) ಮತ್ತು ಬಾಗಲಕೋಟೆ (Bagalkote) ಜಿಲ್ಲೆಗಳಲ್ಲಿ ಶೀಘ್ರದಲ್ಲೇ ನಡೆಯಲಿರುವ ವಿಧಾನಸಭಾ ಉಪಚುನಾವಣೆಗೆ (By-Election) ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿವೆ. ಬಿಜೆಪಿ ಕಾಂಗ್ರೆಸ್​​ ಎಲ್ಲಾ ಪಕ್ಷಗಳ ಭಾರೀ ಸಿದ್ದತೆಯಲ್ಲಿ ತೊಡಗಿದ್ರೆ ಈ ಮಧ್ಯೆ ಇವರಿಗೆ ಶಾಕ್​ ಕೊಡಲು ಶಿವಸೇನೆ ಎಂಟ್ರಿಯಾಗುತ್ತಿದೆ. ಮಹಾರಾಷ್ಟ್ರದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಪಕ್ಷವೂ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿದೆ.
ಶಿವಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ ಕುಲಕರ್ಣಿ ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ. ಈ ಘೋಷಣೆಯಿಂದ ಈ ಎರಡು ಕ್ಷೇತ್ರಗಳ ರಾಜಕೀಯ ವಾತಾವರಣ ಇನ್ನಷ್ಟು ರಂಗೇರಿದೆ. ದಾವಣಗೆರೆ, ಬಾಗಲಕೋಟೆ ಉಪಚುನಾವಣೆಗೆ ಸಿದ್ಧತೆ! ಹೌದು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಕ್ಷೇತ್ರ ತೆರವಾಗಿದೆ. ಶಾಮನೂರು ಶಿವಶಂಕರಪ್ಪ ಅವರು ದೀರ್ಘಕಾಲದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಕಾಂಗ್ರೆಸ್‌ನ ಬಲವಾದ ಕೋಟೆಯಾಗಿತ್ತು. ಅವರ ನಿಧನದ ಬಳಿಕ ಈ ಕ್ಷೇತ್ರದಲ್ಲಿ ಉಪಚುನಾವಣೆ ಅನಿವಾರ್ಯವಾಗಿದೆ. ಅದೇ ರೀತಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್.ವೈ. ಮೇಟಿ ಅವರ ನಿಧನದಿಂದ ಕ್ಷೇತ್ರ ಖಾಲಿಯಾಗಿದೆ. ಈ ಎರಡು ಕ್ಷೇತ್ರಗಳಲ್ಲೂ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ತಯಾರಿ ಆರಂಭಿಸಿವೆ.
ಕಾಂಗ್ರೆಸ್​​ ಮತ್ತು ಬಿಜೆಪಿಗೆ ಶಾಕ್​ ಕೊಡುವ ನಿಟ್ಟಿನಲ್ಲಿ ಶಿವಸೇನೆ ಪಕ್ಷ ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ತೆಗೆದುಕೊಂಡಿದೆ. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ಬಲವಾದ ಪಕ್ಷವಾಗಿದ್ದು, ಕರ್ನಾಟಕದಲ್ಲಿ ತನ್ನ ಪ್ರಭಾವವನ್ನು ಹರಿಬಿಡಲು ಈ ಉಪಚುನಾವಣೆಯನ್ನು ಅವಕಾಶವಾಗಿ ನೋಡುತ್ತಿದೆ. ಗಂಗಾಧರ ಕುಲಕರ್ಣಿ ಸುದ್ದಿಗೋಷ್ಠಿಯಲ್ಲಿ ಹೇಳಿದಂತೆ, ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಭಿವೃದ್ಧಿ ಮತ್ತು ಹಿಂದುತ್ವದ ಆಧಾರದ ಮೇಲೆ ಸ್ಪರ್ಧೆ ನಡೆಸಲು ಪಕ್ಷ ಸಿದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಶಿವಸೇನೆಯು ತನ್ನ ಸಿದ್ಧತೆಯನ್ನು ಭರ್ಜರಿಯಾಗಿ ಮಾಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ.

Source : News18 Kannada

2 hours ago

Home Flash News