... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಕರೂರು ಕಾಲ್ತುಳಿತ: ವಿಜಯ್‌ಗೆ ಮತ್ತೆ ಸಮನ್ಸ್‌ ಜಾರಿ ಮಾಡಿದ ಸಿಬಿಐ

ಕರೂರು ಕಾಲ್ತುಳಿತ: ವಿಜಯ್‌ಗೆ ಮತ್ತೆ ಸಮನ್ಸ್‌ ಜಾರಿ ಮಾಡಿದ ಸಿಬಿಐ

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ಜಾರಿ ಮಾಡಿದೆ. ಮಾರ್ಚ್ 15ರಂದು ದೆಹಲಿಯ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮುನ್ನ ಜನವರಿ 12 ಮತ್ತು 19ರಂದು ಸಹ ವಿಜಯ್ ಅವರನ್ನು ಸಿಬಿಐ ವಿಚಾರಣೆ ನಡೆಸಿತ್ತು. ಮಾರ್ಚ್ 9ರಂದು ವಿಜಯ್‌ಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ವಿಜಯ್ 15 ದಿನಗಳವರಗೆ ವಿಚಾರಣೆ ಮುಂದೂಡುವಂತೆ ಕೋರಿದ್ದರು. 

ಅಲ್ಲದೆ ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಗಳಿಂದಾಗಿ ರಾಜಕೀಯ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಚೆನ್ನೈ ಅಥವಾ ತಮಿಳುನಾಡಿನ ಯಾವುದೇ ಕಚೇರಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿದ್ದರು. 2025ರ ಸೆಪ್ಟೆಂಬರ್‌ 27ರಂದು ನಡೆದ ಟಿವಿಕೆ ಪಕ್ಷದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಸುಪ್ರೀಂ ಕೋರ್ಟ್‌ ಆದೇಶದ ಬಳಿಕ ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ.

Source : Prajavani

1 hour ago

Home Flash News