... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
IPL 2026: RCB ತಂಡದ ಮೊದಲ ಎದುರಾಳಿ ಫಿಕ್ಸ್​?

IPL 2026: RCB ತಂಡದ ಮೊದಲ ಎದುರಾಳಿ ಫಿಕ್ಸ್​?

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ಮಾರ್ಚ್ 28 ರಿಂದ ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಟೂರ್ನಿಯ ಮೊದಲ ಮ್ಯಾಚ್​ನಲ್ಲಿ ಸೌತ್ ಡರ್ಬಿಯ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುವುದು ಖಚಿತವಾಗಿದೆ. ಆರ್​ಸಿಬಿ ವಿರುದ್ಧ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಲು ಐಪಿಎಲ್ ಗವರ್ನರ್ ಕೌನ್ಸಿಲ್ ನಿರ್ಧರಿಸಿದೆ. 

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಸಿದ್ಧತೆಗಳು ಶುರುವಾಗಿದೆ. ಮಾರ್ಚ್ 28 ರಂದು ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಖಚಿತವಾಗಿದೆ.
ಇದಾಗ್ಯೂ ಕಳೆದ ಬಾರಿಯ ರನ್ನರ್ ಅಪ್ ತಂಡ ಪಂಜಾಬ್ ಕಿಂಗ್ಸ್ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿದು ಬಂದಿದೆ. ಬದಲಿಗೆ ಸೌತ್ ಡರ್ಬಿಯ ಬಲಿಷ್ಠ ಎರಡು ಟೀಮ್​ಗಳನ್ನು ಮುಖಾಮುಖಿ ಮಾಡಲು ಐಪಿಎಲ್ ಗವರ್ನರ್ ಕೌನ್ಸಿಲ್ ನಿರ್ಧರಿಸಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮೊದಲ ಮ್ಯಾಚ್​ನಲ್ಲೇ ಮುಖಾಮುಖಿಯಾಗಲಿದ್ದಾರೆ ಎಂದು ವರದಿಯಾಗಿದೆ. ಮುಂಬೈನಲ್ಲಿ ನಡೆದ ಐಪಿಎಲ್​ ಗವರ್ನರ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಎರಡು ಫ್ರಾಂಚೈಸಿಗಳ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ತಿಳಿದು ಬಂದಿದೆ.

Source : TV9 Kannada

1 hour ago

Home Flash News