... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಯುದ್ಧದ ಪರಿಣಾಮ ಯಾದಗಿರಿಯ 28 ರೈಸ್ ಮಿಲ್‌ಗಳಿಗೆ ಭಾರೀ ಹೊಡೆತ!

Iran-Israel War: ಯುದ್ಧದ ಪರಿಣಾಮ ಯಾದಗಿರಿಯ 28 ರೈಸ್ ಮಿಲ್‌ಗಳಿಗೆ ಭಾರೀ ಹೊಡೆತ!

ಇರಾನ್-ಇಸ್ರೇಲ್ ಯುದ್ಧದಿಂದ ಯಾದಗಿರಿ ಜಿಲ್ಲೆಯ ಅಕ್ಕಿ ಉದ್ಯಮಕ್ಕೆ ಭಾರಿ ನಷ್ಟವಾಗಿದೆ. ಗಲ್ಫ್ ರಾಷ್ಟ್ರಗಳಿಗೆ ಅಕ್ಕಿ ರಫ್ತು ಸಂಪೂರ್ಣ ನಿಂತಿದ್ದು, ಸ್ಥಳೀಯ ರೈಸ್ ಮಿಲ್‌ಗಳು ಸಂಕಷ್ಟಕ್ಕೆ ಸಿಲುಕಿವೆ. ರೈತರಿಂದ ಹೆಚ್ಚಿನ ಬೆಲೆಗೆ ಭತ್ತ ಖರೀದಿಸಿದ್ದ ಮಾಲೀಕರು ಅಕ್ಕಿಯನ್ನು ಮಾರಾಟ ಮಾಡಲಾಗದೆ ಮಿಲ್‌ಗಳನ್ನು ಮುಚ್ಚುವ ಹಂತಕ್ಕೆ ತಲುಪಿದ್ದಾರೆ. ಇದರಿಂದ ನೂರಾರು ಕಾರ್ಮಿಕರು ಕೆಲಸ ಕಳೆದುಕೊಂಡಿದ್ದು, ಬ್ಯಾಂಕ್ ಸಾಲ ತೀರಿಸಲೂ ಕಷ್ಟವಾಗಿದೆ ಎಂದು ರೈಸ್ ಮಿಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.
ಯಾದಗಿರಿ, ಮಾರ್ಚ್​ 13: ಇರಾನ್–ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಇದೀಗ ಗಲ್ಫ್ ರಾಷ್ಟ್ರಗಳ ಮೇಲಷ್ಟೇ ಅಲ್ಲದೆ ಭಾರತದ ಕೆಲವು ಉದ್ಯಮಗಳ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಈಗಾಗಲೆ ಬೆಂಗಳೂರು ಸೇರಿ ದೇಶದ ಹಲವೆಡೆ ಎಲ್​ಪಿಜಿ ಗ್ಯಾಸ್ ಸಿಲಿಂಡರ್ (LPG cylinder crisis) ಕೊರತೆ ತಲೆಯಿತ್ತಿದೆ. ಅದಲ್ಲದೆ ಗಲ್ಫ್ ರಾಷ್ಟ್ರಗಳಿಗೆ ರಫ್ತು ಆಗುತ್ತಿದ್ದ ಅಕ್ಕಿ ವ್ಯಾಪಾರ ಸಂಪೂರ್ಣ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ರೈಸ್ ಮಿಲ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದು, ಹಲವಾರು ಮಿಲ್‌ಗಳು ಬಂದ್ ಆಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ವ್ಯಾಪಾರವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಮಿಲ್ ಮಾಲೀಕರು ಯಾದಗಿರಿ ಜಿಲ್ಲೆಯಲ್ಲಿ ಬೆಳೆಯುವ ಸೋನಾ ಮಸೂರಿ ಅಕ್ಕಿಗೆ ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿನ ಬೇಡಿಕೆ ಇದೆ. ಜಿಲ್ಲೆಯಿಂದ ವಿವಿಧ ಮಹಾನಗರಗಳ ಮೂಲಕ ಈ ಅಕ್ಕಿಯನ್ನು ವಿದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು. ವಿಶೇಷವಾಗಿ ಸೌದಿ ಅರೇಬಿಯಾ, ದುಬೈ, ಕುವೈತ್ ಸೇರಿದಂತೆ ಹಲವು ಗಲ್ಫ್ ರಾಷ್ಟ್ರಗಳಿಗೆ ಅಕ್ಕಿ ಸಾಗಾಟ ನಡೆಯುತ್ತಿತ್ತು. ಪ್ರತಿದಿನವೂ ಯಾದಗಿರಿಯಿಂದ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಕ್ವಿಂಟಲ್ ಅಕ್ಕಿ ವಿದೇಶಗಳಿಗೆ ರಫ್ತು ಆಗುತ್ತಿತ್ತು.

 ಆದರೆ ಇತ್ತೀಚೆಗೆ ಇರಾನ್–ಇಸ್ರೇಲ್ ಯುದ್ಧದ ಪರಿಣಾಮ ಗಲ್ಫ್ ರಾಷ್ಟ್ರಗಳ ವ್ಯಾಪಾರ ಚಟುವಟಿಕೆಗಳು ಕುಂಠಿತಗೊಂಡಿದ್ದು, ಅಕ್ಕಿ ರಫ್ತು ಸಂಪೂರ್ಣವಾಗಿ ನಿಂತಿದೆ. ಇದರಿಂದ ಮಿಲ್ ಮಾಲೀಕರಿಗೆ ಭಾರೀ ಹೊಡೆತ ಬಿದ್ದಿದೆ. ಎರಡು ತಿಂಗಳ ಹಿಂದೆ ರೈತರಿಂದ ಹೆಚ್ಚಿನ ದರಕ್ಕೆ ಭತ್ತ ಖರೀದಿ ಮಾಡಿದ್ದ ಮಿಲ್ ಮಾಲೀಕರು, ಅದನ್ನು ಅಕ್ಕಿಯಾಗಿಸಿ ವಿದೇಶಗಳಿಗೆ ರಫ್ತು ಮಾಡಲು ಯೋಜಿಸಿದ್ದರು. ಆದರೆ ಈಗ ರಫ್ತು ಸ್ಥಗಿತಗೊಂಡಿರುವುದರಿಂದ ಅಕ್ಕಿಯನ್ನು ಸ್ಥಳೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Source : TV9 Kannada

1 hour ago

Home Flash News