... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
Bengaluru: 'ಟ್ರಬಲ್ ಶೂಟರ್'​ ರೆಸಾರ್ಟ್ ಪಾಲಿಟಿಕ್ಸ್​;

Bengaluru: 'ಟ್ರಬಲ್ ಶೂಟರ್'​ ರೆಸಾರ್ಟ್ ಪಾಲಿಟಿಕ್ಸ್​; 10ಕ್ಕೂ ಹೆಚ್ಚು ಕೈ ಶಾಸಕರು ಬಿಡದಿ ರೆಸಾರ್ಟ್​ಗೆ​ ಶಿಫ್ಟ್​

ಬೆಂಗಳೂರು (ಮಾ.13): ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಒಡಿಶಾದಲ್ಲಿ (Odisha) ನಡೆಯಲಿರುವ ರಾಜ್ಯಸಭಾ ಚುನಾವಣೆಯ (Rajyasabha Election) ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ಹಿನ್ನೆಲೆ ಒಡಿಶಾದ (Assam) 14ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರನ್ನು (Congress MLAs) ಬೆಂಗಳೂರಿನ ಬಿಡದಿ ರೆಸಾರ್ಟ್​​ಗೆ ಶಿಫ್ಟ್‌ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್​ ಭುವನೇಶ್ವರದಿಂದ ಇಂಡಿಗೋ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ. 

ರಾತ್ರಿ ಸುಮಾರು 11 ಗಂಟೆ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎಬಿ) ಬಂದ ಶಾಸಕರನ್ನು ಡಿಕೆ ಶಿವಕುಮಾರ್ ಆಪ್ತರು ಹಾಗೂ ಕೈ ಮುಖಂಡರು ಸ್ವಾಗತಿಸಿದರು. ಕಾಂಗ್ರೆಸ್​​ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಡಿಕೆಶಿ ರೆಸಾರ್ಟ್​ ಪಾಲಿಟಿಕ್ಸ್​​​ ಗೇಮ್ಸ್​ ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ. 10ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಒಡಿಶಾ ಎಲೆಕ್ಷನ್​​ನಲ್ಲಿ ಅಡ್ಡ ಮತದಾನ ತಡೆಯಲು ಟ್ರಬಲ್ ಶೂಟರ್​ ಡಿಕೆಶಿ ಕೈ ಶಾಸಕರನ್ನ ಬೆಂಗಳೂರಿಗೆ ಕರೆತಂದಿದ್ದಾರೆ. ಬೆಂಗಳೂರಿನ ಏರ್​ಪೋರ್ಟ್​​ಗೆ 10ಕ್ಕೂ ಹೆಚ್ಚು ಶಾಸಕರು ಬಂದಿಳಿದಿದ್ದಾರೆ. ಏಳು ಇನೋವಾ ಕಾರುಗಳಲ್ಲಿ ಶಾಸಕರನ್ನ ರೆಸಾರ್ಟ್​ಗೆ ಶಿಫ್ಟ್ ಮಾಡಲಾಗಿದೆ.

Source : News18 Kannada

1 hour ago

Home Flash News