... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು ಇರಾನ್ ಅಧ್ಯಕ್ಷರೊಂದಿಗೆ ಪಿಎಂ ಮೋದಿ ಮಾತುಕತೆ

ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು ಇರಾನ್ ಅಧ್ಯಕ್ಷರೊಂದಿಗೆ ಪಿಎಂ ಮೋದಿ ಮಾತುಕತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ತಲೆದೋರಿರುವ ಗಂಭೀರ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರಿಗೆ ಗುರುವಾರ ರಾತ್ರಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಬಿಕ್ಕಟ್ಟು, ಜೀವ ಕಳೆದುಕೊಳ್ಳುತ್ತಿರುವ ಮುಗ್ದ ನಾಗರಿಕರು ಮತ್ತು ಮೂಲಸೌಕರ್ಯ ನಾಶ ಕುರಿತು ಪ್ರಧಾನಿ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಜತೆಗೆ ಭಾರತೀಯ ನಾಗರಿಕರ ಸುರಕ್ಷೆ, ಅಡೆತಡೆ ಇಲ್ಲದೆ ಸರಕು ಹಾಗೂ ಇಂಧನ ಸಾಗಣೆಯು ಭಾರತದ ಪ್ರಮುಖ ಆದ್ಯತೆಯಾಗಿದೆ ಎಂದು ವರದಿಯಾಗಿದೆ. 'ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜಶ್ಕಿಯಾನ್ ಜತೆ ಗುರುವಾರ ರಾತ್ರಿ ಮಾತುಕತೆ ನಡೆಸಿದೆ. 

ಪಶ್ಚಿಮ ಏಷ್ಯಾದಲ್ಲಿ ತಲೆದೋರಿರುವ ಗಂಭೀರ ಪರಿಸ್ಥಿತಿ ಕುರಿತು ಮಾತುಕತೆ ನಡೆಯಿತು. ಪರಿಸ್ಥಿತಿ ಹದಗೆಡುತ್ತಿರುವುದರ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದೆ ಮತ್ತು ನಾಗರಿಕರು ಮತ್ತು ಮೂಲಸೌಕರ್ಯ ಆಗಿರುವ ನಷ್ಟದ ಕುರಿತು ಕವಳ ವ್ಯಕ್ತಪಡಿಸಿದೆ’ ಎಂದು ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ‘ಶಾಂತಿ ಮತ್ತು ಸ್ಥಿರತೆ ಕಾಪಾಡುವಲ್ಲಿ ಭಾರತದ ಬದ್ಧತೆ ಮತ್ತು ಮಾತುಕತೆ ಹಾಗೂ ರಾಜತಾಂತ್ರಿಕ ಮಾರ್ಗದ ಮೂಲಕ ಬಿಕ್ಕಟ್ಟು ಶಮನಗೊಳಿಸುವಂತೆ ಒತ್ತಿ ಹೇಳಲಾಯಿತು’ ಎಂದಿದ್ದಾರೆ.

Source : Prajavani

2 hours ago

Home Flash News