... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ತವರಿನಲ್ಲಿ ರಾಜಕೀಯ ಜೀವನದ ಬಗ್ಗೆ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ;

Mysuru-Siddaramaiah: ತವರಿನಲ್ಲಿ ರಾಜಕೀಯ ಜೀವನದ ಬಗ್ಗೆ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ; ಮಗನ ಬಗ್ಗೆಯೂ ಸಿಎಂ ಮನದ ಮಾತು

ಮೈಸೂರು (ಮಾ.13): ಕಾಂಗ್ರೆಸ್​ನಲ್ಲಿ (Congress) ನಾಯಕತ್ವ ಬದಲಾವಣೆ ಚರ್ಚೆ ಗರಿಗೆದರಿದೆ. ಬಜೆಟ್ ಬಳಿಕ ಸಿಎಂ ಬದಲಾವಣೆ ಎನ್ನುವ ಮಾತು ಕೇಳಿ ಬರ್ತಿದೆ. ಇದೇ ವೇಳೆ ತವರು ಕ್ಷೇತ್ರ ಮೈಸೂರಿನಲ್ಲಿ (Mysuru) ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ರಾಜಕೀಯ ಜೀವನದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲೇ ಇರ್ತೇನೆ, ಜನರ ಸೇವೆ ಮಾಡುತ್ತೇನೆ ಎಂದಿದ್ದಾರೆ. ಅಷ್ಟೇ ಅಲ್ಲದೇ ಮಗನ ರಾಜಕೀಯ ಜೀವನದ ಬಗ್ಗೆಯೂ ಸಿದ್ದರಾಮಯ್ಯ ಮನದ ಮಾತಾಡಿದ್ದಾರೆ.
'ಕೊನೇ ಉಸಿರಿನವರೆಗೂ ರಾಜಕೀಯದಲ್ಲೇ ' ವರುಣಾ ಕ್ಷೇತ್ರ ವ್ಯಾಪ್ತಿಯ ವರಕೋಡು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತಾಡಿದ ಸಿದ್ದರಾಮಯ್ಯ ಅವ್ರು, ಬಹಳ ಸಂತೋಷದಿಂದ ದೇವಸ್ಥಾನವನ್ನು ಉದ್ಘಾಟನೆ ಮಾಡಿದ್ದೇನೆ. ನಾನು ರಾಜಕೀಯದಲ್ಲಿ ಇಷ್ಟು ಮಟ್ಟಕ್ಕೆ ಬೆಳೆಯೋಕೆ ನೀವೇ ಕಾರಣ. ನಾನು ನನ್ನ ರಾಜಕೀಯ ಜೀವನದಲ್ಲಿ ಸೋಲು-ಗೆಲುವನ್ನ ಕಂಡಿದ್ದೇನೆ. ಕೊನೆಯ ಉಸಿರು ಇರೋವರೆಗೂ ರಾಜಕೀಯದಲ್ಲೇ ಇರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ನನ್ನ ಮಗನನ್ನೂ ಬೆಳೆಸಿ ಎಂದ ಸಿದ್ದರಾಮಯ್ಯ ನಾನು ಇತ್ತೀಚಿನ ದಿನಗಳಲ್ಲಿ ಈ ಕ್ಷೇತ್ರಕ್ಕೆ ಹೆಚ್ಚು ಬಾರಿ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂದ ಸಿದ್ದರಾಮಯ್ಯ ಅವ್ರು ನನ್ನ ಮಗನಿಗೆ ಕ್ಷೇತ್ರದ ಜನರ ಕಷ್ಟಕ್ಕೆ ಸ್ಪಂದಿಸುವಂತೆ ಸೂಚಿಸಿದ್ದೇನೆ ಎಂದ್ರು. ಅಲ್ಲದೇ ಯತೀಂದ್ರ ಆಗಾಗ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ನೀವು ನನ್ನನ್ನು ಬೆಳೆಸಿದ ಹಾಗೆಯೇ ನನ್ನ ಮಗ ಯತೀಂದ್ರನನ್ನೂ ರಾಜಕೀಯವಾಗಿ ಬೆಳೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಜನರಲ್ಲಿ ಮನವಿ ಮಾಡಿದ್ರು.

Source : News18 Kannada

2 hours ago

Home Flash News