ಹೊಸ ಪಕ್ಷದ ಹೆಸರು ಘೋಷಿಸಿದ ಶಶಿಕಲಾ: ಪಕ್ಷದ ಚಿಹ್ನೆಯಾಗಿ ‘ತೆಂಗಿನ ತೋಟ’
ಚೆನ್ನೈ: ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿ.ಕೆ ಶಶಿಕಲಾ ಅವರು ಶುಕ್ರವಾರ(ಮಾ.13) ಹೊಸ ಪಕ್ಷದ ಹೆಸರನ್ನು ಘೋಷಿಸಿದ್ದಾರೆ. ಇತ್ತೀಚೆಗಷ್ಟೇ ಹೊಸ ಪಕ್ಷ ಸ್ಥಾಪಿಸುವುದಾಗಿ ತಿಳಿಸಿದ್ದ ಶಶಿಕಲಾ, ತಮ್ಮ ಪಕ್ಷಕ್ಕೆ ‘ಅಖಿಲ ಭಾರತ ಪುರಚಿ ತಲೈವರ್ ಮಕ್ಕಳ್ ಮುನ್ನೇತ್ರ ಕಳಗಂ’ ಎಂದು ಹೆಸರಿಟ್ಟಿದ್ದಾರೆ.
ಪಕ್ಷದ ಚಿಹ್ನೆಯಾಗಿ ‘ತೆಂಗಿನ ತೋಟ’ವನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು ‘ನಮ್ಮ ಪಕ್ಷವು ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಚುನಾವಣೆಯಲ್ಲಿ ತಮ್ಮ ಪಕ್ಷ ನಿರ್ಣಾಯಕ ಪಾತ್ರ ವಹಿಸಲಿದೆ’ ಎಂದು ಹೇಳಿದ್ದಾರೆ.
ಫೆ.24ರಂದು ಎಐಎಡಿಎಂಕೆ ನಾಯಕಿ ಜಯಲಲಿತಾ ಅವರ 78ನೇ ಜನ್ಮ ಜಯಂತಿಯ ಸಂದರ್ಭದಲ್ಲಿ ರಾಮನಾಥಪುರಂ ಜಿಲ್ಲೆಯ ಕಾಮುತಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೊಸ ಪಕ್ಷದ ಧ್ವಜವನ್ನು ಅನಾವರಣಗೊಳಿಸಿದ್ದರು. ಅದರಲ್ಲಿ ಕಪ್ಪು, ಬಿಳಿ ಮತ್ತು ಕೆಂಪು ಬಣ್ಣದ ಅಡ್ಡ ಪಟ್ಟೆಗಳನ್ನು ಹೊಂದಿದ್ದು, ದ್ರಾವಿಡ ಹೋರಾಟದ ದಿಗ್ಗಜರಾದ ಸಿ.ಎನ್ ಅಣ್ಣಾದೊರೈ, ಎಂ.ಜಿ ರಾಮಚಂದ್ರನ್ ಮತ್ತು ಜೆ.ಜಯಲಲಿತಾ ಅವರ ಭಾವಚಿತ್ರಗಳಿದ್ದವು.