... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಒಡಿಶಾ ರಾಜಕೀಯದಲ್ಲಿ ಸಂಚಲನ:

ಒಡಿಶಾ ರಾಜಕೀಯದಲ್ಲಿ ಸಂಚಲನ: ಅಡ್ಡ ಮತದಾನ ಮಾಡಿದ ಮೂವರು ಕಾಂಗ್ರೆಸ್ ಶಾಸಕರು ಅಮಾನತು

ಭುವನೇಶ್ವರ: ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸಿದ ಆರೋಪದ ಮೇಲೆ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ (OPCC) ಮಂಗಳವಾರ ಮೂವರು ಶಾಸಕರನ್ನು ಪಕ್ಷದಿಂದ ಅಮಾನತುಗೊಳಿಸಿದೆ. ಸೋಫಿಯಾ ಫಿರ್ದೌಸ್ (ಬಾರಬತಿ-ಕಟಕ್), ರಮೇಶ್ ಚಂದ್ರ ಜೇನಾ (ಸನಾಖೇಮುಂಡಿ) ಮತ್ತು ದಶರಥಿ ಗಮಾಂಗೊ (ಮೋಹನಾ).ಅಮಾನತುಗೊಂಡ ಶಾಸಕರಾಗಿದ್ದಾರೆ. ಈ ಮೂವರು ಶಾಸಕರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಾ. ದತ್ತೇಶ್ವರ್ ಹೋತಾ ಅವರಿಗೆ ಮತ ಹಾಕುವ ಬದಲು, ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ದಿಲೀಪ್ ರೇ ಅವರಿಗೆ ಮತ ಚಲಾಯಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದು, "ಯಾರು ಕಾಂಗ್ರೆಸ್‌ಗೆ ದ್ರೋಹ ಮಾಡುತ್ತಾರೋ ಅವರು ರಾಷ್ಟ್ರಕ್ಕೆ ದ್ರೋಹ ಮಾಡಿದಂತೆ" ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿ, ಸಂವಿಧಾನದ 10ನೇ ಶೆಡ್ಯೂಲ್ (ಪಕ್ಷಾಂತರ ನಿರೋಧಕ ಕಾಯ್ದೆ) ಅಡಿಯಲ್ಲಿ ಅವರನ್ನು ಅನರ್ಹಗೊಳಿಸಲು ಪಕ್ಷ ನಿರ್ಧರಿಸಿದೆ. ಈ ಮೂವರು ಕಾಂಗ್ರೆಸ್ ಶಾಸಕರು ಮಾತ್ರವಲ್ಲದೆ, ಬಿಜು ಜನತಾ ದಳದ (ಬಿಜೆಡಿ) ಎಂಟು ಶಾಸಕರು ಕೂಡ ದಿಲೀಪ್ ರಾಯ್ ಪರವಾಗಿ ಮತ ಚಲಾಯಿಸಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಮತ್ತು ಬಿಜೆಡಿ ಜಂಟಿಯಾಗಿ ಬೆಂಬಲಿಸಿದ್ದ 'ಸೇನಾ ಅಭ್ಯರ್ಥಿ' ದತ್ತೇಶ್ವರ ಹೋತಾ ಅವರು ಪರಾಭವಗೊಂಡಿದ್ದಾರೆ. ಒಟ್ಟು 4 ರಾಜ್ಯಸಭಾ ಸ್ಥಾನಗಳ ಪೈಕಿ ಬಿಜೆಪಿ 2, ಬಿಜೆಡಿ 1 ಮತ್ತು ದಿಲೀಪ್ ರಾಯ್ 1 ಸ್ಥಾನದಲ್ಲಿ ಜಯಗಳಿಸಿದ್ದಾರೆ.

Source : Udayavani

1 hour ago

Home Flash News