... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಪಶ್ಚಿಮ ಏಷ್ಯಾ ಸಂಘರ್ಷ: ಯುಎಇ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಪಶ್ಚಿಮ ಏಷ್ಯಾ ಸಂಘರ್ಷ: ಯುಎಇ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ದೂರವಾಣಿ ಕರೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದ ಈಗಿನ ಸ್ಥಿತಿಗತಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹೊರ್ಮುಜ್ ಜಲಸಂಧಿ ಸುರಕ್ಷಿತವಾಗಿಡುವುದು ಮತ್ತು ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಅಲ್ಲದೆ ಕೊಲ್ಲಿ ರಾಷ್ಟ್ರಗಳ ಮೇಲಿನ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಯ ಮರುಸ್ಥಾಪನೆಗಾಗಿ ಒಗ್ಗಟ್ಟಾಗಿ ಕೆಲಸ ಮಾಡಲು ಸಹಮತ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಯುಎಇ ಅಧ್ಯಕ್ಷ ನಹ್ಯಾನ್ ಅವರನ್ನು 'ಸಹೋದರ' ಎಂದು ಸಂಬೋಧಿಸಿದ್ದು, ಮುಂಚಿತವಾಗಿ ಈದ್ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. 'ನಾವು ಪಶ್ಚಿಮ ಏಷ್ಯಾದ ಈಗಿನ ಸ್ಥಿತಿಗತಿ ಬಗ್ಗೆ ಚರ್ಚಿಸಿದ್ದೇವೆ. ಯುಎಇ ಮೇಲೆ ನಡೆದ ದಾಳಿಗಳಿಂದ ಅಮಾಯಕರು ಜೀವ ಕಳೆದುಕೊಂಡಿದ್ದು, ನಾಗರಿಕ ಮೂಲಸೌಕರ್ಯಕ್ಕೆ ಹಾನಿಯಾಗಿದೆ. ಈ ಎಲ್ಲ ದಾಳಿಗಳನ್ನು ಭಾರತ ಬಲವಾಗಿ ಖಂಡಿಸುತ್ತದೆ' ಎಂದು ಹೇಳಿದ್ದಾರೆ. 'ಹೊರ್ಮುಜ್ ಜಲಸಂಧಿ ಮೂಲಕ ಸುರಕ್ಷಿತ ಹಾಗೂ ಮುಕ್ತ ಸಂಚಾರ ಖಚಿತಪಡಿಸಿಕೊಳ್ಳುವ ಮಹತ್ವವನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಪ್ರದೇಶದಲ್ಲಿ ಶಾಂತಿ, ಭದ್ರತೆ ಹಾಗೂ ಸ್ಥಿರತೆ ನೆಲೆಸಲು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ' ಎಂದು ಹೇಳಿದ್ದಾರೆ.

 ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿಯ ಬಳಿಕ ಎರಡನೇ ಬಾರಿಗೆ ಯುಎಇ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಬೆನ್ನಲ್ಲೇ ಈಗಾಗಲೇ ಹಲವಾರು ನಾಯಕರೊಂದಿಗೆ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಸೌದಿ ಅರೇಬಿಯಾ, ಬಹರೇನ್, ಕುವೈತ್, ಒಮಾನ್, ಜೋರ್ಡಾನ್, ಇಸ್ರೇಲ್ ಹಾಗೂ ಇರಾನ್ ದೇಶಗಳ ನಾಯಕರೊಂದಿಗೆ ಮಾತನಾಡಿದ್ದಾರೆ. ಮತ್ತೊಂದೆಡೆ ಅಮೆರಿಕ ನೆಲೆಗಳನ್ನು ಹೊಂದಿರುವ ಕೊಹ್ಲಿ ರಾಷ್ಟ್ರಗಳ ಮೇಲೆ ಇರಾನ್ ನಿರಂತರವಾಗಿ ದಾಳಿ ನಡೆಸುತ್ತಲೇ ಇದೆ.

Source : Prajavani

1 hour ago

Home Flash News