... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಚೀನಕ್ಕೆ ಭಾರತದ ನೂತನ ರಾಯಭಾರಿಯಾಗಿ ವಿಕ್ರಮ್ ದೊರೈಸ್ವಾಮಿ ನೇಮಕ

ಚೀನಕ್ಕೆ ಭಾರತದ ನೂತನ ರಾಯಭಾರಿಯಾಗಿ ವಿಕ್ರಮ್ ದೊರೈಸ್ವಾಮಿ ನೇಮಕ

ನವದೆಹಲಿ: ನೆರೆಯ ಚೀನದೊಂದಿಗೆ ಗಡಿ ಸಂಘರ್ಷದ ನಡುವೆಯೇ ದ್ವಿಪಕ್ಷೀಯ ಸಂಬಂಧವನ್ನು ಸುಧಾರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಅನುಭವಿ ರಾಜತಾಂತ್ರಿಕ ಅಧಿಕಾರಿ ವಿಕ್ರಮ್ ದೊರೈಸ್ವಾಮಿ ಅವರನ್ನು ಚೀನಕ್ಕೆ ಭಾರತದ ಮುಂದಿನ ರಾಯಭಾರಿಯಾಗಿ ಗುರುವಾರ ನೇಮಕ ಮಾಡಲಾಗಿದೆ. ಅನುಭವಿ ರಾಜತಾಂತ್ರಿಕ ಅಧಿಕಾರಿ 1992ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ (IFS) ಅಧಿಕಾರಿಯಾಗಿರುವ ವಿಕ್ರಮ್ ದೊರೈಸ್ವಾಮಿ ಅವರು ಸದ್ಯ ಯುನೈಟೆಡ್ ಕಿಂಗ್‌ಡಮ್‌ನಲ್ಲಿ (UK) ಭಾರತದ ಹೈಕಮಿಷನರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಅವರು ಬಾಂಗ್ಲಾದೇಶ ಸೇರಿದಂತೆ ಹಲವು ದೇಶಗಳಲ್ಲಿ ಭಾರತದ ಪ್ರತಿನಿಧಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

 ಸಂಬಂಧ ಸುಧಾರಣೆಗೆ ಒತ್ತು ಕಳೆದ ನಾಲ್ಕು ವರ್ಷಗಳಿಂದ ಪೂರ್ವ ಲಡಾಖ್ ಗಡಿ ಭಾಗದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಭಾರತ ಮತ್ತು ಚೀನ ನಡುವಿನ ಸಂಬಂಧ ಹಳಸಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಹಿರಿಯ ಅಧಿಕಾರಿಯೊಬ್ಬರನ್ನು ಬೀಜಿಂಗ್‌ಗೆ ಕಳುಹಿಸುವ ಮೂಲಕ, ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಪುನರ್ ನಿರ್ಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಪ್ರಸ್ತುತ ಚೀನದಲ್ಲಿ ಭಾರತದ ರಾಯಭಾರಿಯಾಗಿರುವ ಪ್ರದೀಪ್ ಕುಮಾರ್ ರಾವತ್ ಅವರ ಸ್ಥಾನವನ್ನು ದೊರೈಸ್ವಾಮಿ ಅಲಂಕರಿಸಲಿದ್ದಾರೆ. ವಿಕ್ರಮ್ ದೊರೈಸ್ವಾಮಿ ಅವರು ಶೀಘ್ರದಲ್ಲೇ ಬೀಜಿಂಗ್‌ನಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತವಾಗಿ ಪ್ರಕಟಿಸಿದೆ.

Source : Prajavani

1 hour ago

Home Flash News