... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಅಯೋಧ್ಯೆ ರಾಮ ಮಂದಿರಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, 'ರಾಮ ಯಂತ್ರ' ಸ್ಥಾಪನೆ

Ayodhya Ram Mandir: ಅಯೋಧ್ಯೆ ರಾಮ ಮಂದಿರಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, 'ರಾಮ ಯಂತ್ರ' ಸ್ಥಾಪನೆ

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ಅಯೋಧ್ಯೆಯ ರಾಮ ಜನ್ಮಭೂಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ವೇಳೆ, ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಷ್ಟ್ರಪತಿಗಳಿಗೆ ಸಾಥ್ ನೀಡಿದರು. ರಾಷ್ಟ್ರಪತಿಗಳು ರಾಮಲಲ್ಲಾ ವಿಗ್ರಹಕ್ಕೆ ಆರತಿ ಬೆಳಗಿ, ದೇವಾಲಯದ ಆವರಣದಲ್ಲಿ 'ರಾಮ ಯಂತ್ರ' ಸ್ಥಾಪನೆ ನೆರವೇರಿಸಿದರು. ರಾಷ್ಟ್ರಪತಿಗಳ ಭೇಟಿಗೆ ಭರ್ಜರಿ ಸಿದ್ಧತೆ ರಾಮ ಮಂದಿರದಲ್ಲಿ ಆಯೋಜಕರು ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು. ಇದರಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಮತ್ತು ಸಂತರು ಭಾಗವಹಿಸುವ ನಿರೀಕ್ಷೆಯಿದೆ. 

ರಾಮ ಮಂದಿರ ನಿರ್ಮಾಣಕ್ಕೆ ದುಡಿದ ಅನೇಕ ಕಾರ್ಮಿಕರು, ಮಾರಾಟಗಾರರು ಮತ್ತು ಕುಶಲಕರ್ಮಿಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಈ ಕಾರ್ಯಕ್ರಮವು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ. ಈ ವಿಶೇಷ ಸಂದರ್ಭಕ್ಕಾಗಿ ಆಡಳಿತವು ಇಡೀ ಅಯೋಧ್ಯೆ ನಗರವನ್ನು ಸಿಂಗರಿಸಿದೆ. ಪ್ರಮುಖ ರಸ್ತೆಗಳು, ವೃತ್ತಗಳು ಮತ್ತು ರಾಮ ಮಂದಿರಕ್ಕೆ ಹೋಗುವ ದಾರಿಗಳಲ್ಲಿ ರಾಷ್ಟ್ರಪತಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರ ಚಿತ್ರಗಳಿರುವ ದೊಡ್ಡ ಬ್ಯಾನರ್‌ ಮತ್ತು ಪೋಸ್ಟರ್‌ಗಳನ್ನು ಹಾಕಿದ್ದಾರೆ. ನಗರದಾದ್ಯಂತ ಕೇಸರಿ ಧ್ವಜಗಳು ಮತ್ತು ಅಲಂಕಾರಿಕ ತೋರಣಗಳಿಂದ ಬೀದಿಗಳನ್ನು ಅಲಂಕರಿಸಲಾಗಿದ್ದು, ಧಾರ್ಮಿಕ ಹಾಗೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

Source : Asianet News

2 days ago

Home Flash News