... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಬೆಂಗಳೂರಿಗೆ ಶೀಘ್ರವೇ ಎರಡನೇ ವಿಮಾನ ನಿಲ್ದಾಣ; ಇಲ್ಲಿದೆ ಬಿಗ್ ಅಪ್ ಡೇಟ್!

Bengaluru: ಬೆಂಗಳೂರಿಗೆ ಶೀಘ್ರವೇ ಎರಡನೇ ವಿಮಾನ ನಿಲ್ದಾಣ; ಇಲ್ಲಿದೆ ಬಿಗ್ ಅಪ್ ಡೇಟ್!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) (Kempegowda International Airport) ದೇಶದ ಬ್ಯುಸಿಯೆಸ್ಟ್ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ದೇವನಹಳ್ಳಿ (Devanahalli) ವಿಮಾನ ನಿಲ್ದಾಣದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು, ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಯೋಜನೆಯನ್ನು ಘೋಷಣೆ ಮಾಡಿದ್ದರು. ಸದ್ಯ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವೂ (Airports Authority of India) ಈ ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣ ಆಗಬೇಕು ಎಂದು ಶೀಘ್ರವೇ ನಿರ್ಧಾರ ಮಾಡಿ ಕಾರ್ಯಸಾಧ್ಯತೆಯ ಬಗ್ಗೆ ಪರಿಶೀಲನೆ ನಡೆಸಿದೆ.
ಬೆಂಗಳೂರಿನ ಸುತ್ತಮುತ್ತಲಿನ ಮೂರು ಪ್ರದೇಶಗಳನ್ನು ಹೊಸ ವಿಮಾನ ನಿಲ್ದಾಣ ಮಾಡಲು ಗುರಿತಿಸಲಾಗಿದೆ. ಇದರಲ್ಲಿ ಕನಕಪುರ ರಸ್ತೆಯ ಚೂಡಹಳ್ಳಿ ಮತ್ತು ಸೋಮನಹಳ್ಳಿ ಹಾಗೂ ನೆಲಮಂಗಲ ಬಳಿಯ ಕುಣಿಗಲ್ ರಸ್ತೆಯಲ್ಲಿಯೂ ಪ್ರದೇಶವನ್ನು ಗುರುತಿಸಲಾಗಿದೆ. ಭೂಮಿಯ ಗುಣಮಟ್ಟ, ವೆಚ್ಚ ಸೇರಿದಂತೆ ಪ್ರತಿ ಪ್ರದೇಶವನ್ನು ತಲುಪಲು ಸುಲಭ ಮಾರ್ಗ ಲಭ್ಯವೇ ಎಂಬ ವಿಚಾರಗಳನ್ನ ನಿರ್ಧಾರ ಮಾಡಲು ತಜ್ಞರು ಪರಿಶೀಲನೆ ನಡೆಸಲಿದ್ದಾರೆ. ಕೆಇಎ ನಲ್ಲಿ ಭಾರೀ ಬೆಳವಣಿಗೆ ಆಗುತ್ತಿದ್ದು, ದೇಶೀಯ ವಿಮಾನ ಪ್ರಯಾಣ ಹೆಚ್ಚಾಗಿದೆ. ಅಲ್ಲದೇ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಸಂಚಾರವೂ ಶೇಕಡಾ 29ರಷ್ಟು ಹೆಚ್ಚಾಗಿದೆ. ವಿಮಾನ ನಿಲ್ದಾಣದಲ್ಲಿ ದೈನಿಂದಿನ ನಿರ್ಗಮನಗಳು ಸಹ ಹೆಚ್ಚಾಗಿದೆ. ಆದ್ದರಿಂದ 2033ರ ವೇಳೆಗೆ ಬೆಂಗಳೂರಿಗೆ ಎರಡನೇ ವಿಮಾನದ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ದೇವನಹಳ್ಳಿ ವಿಮಾನ ನಿಲ್ದಾಣ ಆರಂಭವಾಗಿ 25 ವರ್ಷಗಳು ಪೂರ್ಣಗೊಳ್ಳಲಿದೆ.

Source : News18 Kannada

2 hours ago

Home Flash News