ಇಸ್ರೇಲ್-ಇರಾನ್ ಸಂಘರ್ಷ:ಈ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ ಸಲಹೆ
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಇಸ್ರೇಲ್-ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ, ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಗಲ್ಫ್ ಪ್ರದೇಶದ 9 ವಾಯುಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ಸಲಹೆ ನೀಡಿದೆ. ಬಹ್ರೇನ್, ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್ ಮತ್ತು ಯುಎಇ ವಾಯುಪ್ರದೇಶಗಳನ್ನು ತಪ್ಪಿಸಲು ಸೂಚಿಸಲಾಗಿದೆ. ಈ ಕ್ರಮವು ವಿಮಾನ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ನವದೆಹಲಿ, ಮಾರ್ಚ್ 20: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ, ನಾಗರಿಕ ವಿಮಾನಯಾನ ನಿರ್ದೇಶನಾಲಯ ಶುಕ್ರವಾರ(ಮಾರ್ಚ್20) ವಿಮಾನಯಾನ ಸಂಸ್ಥೆಗಳು ಗಲ್ಫ್ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಿದೆ.
ಡಿಜಿಸಿಎ ವಿಮಾನಯಾನ ಸಂಸ್ಥೆಗಳು ಬಹ್ರೇನ್, ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಾಯುಪ್ರದೇಶಗಳನ್ನು ತಪ್ಪಿಸುವಂತೆ ಕೇಳಿಕೊಂಡಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಕೆಲವು ಷರತ್ತುಗಳಿಗೆ ಒಳಪಟ್ಟು ಒಮನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ ಮೇಲೆ ಹಾರಾಟ ನಡೆಸಬಹುದು ಎಂದು ನಿಯಂತ್ರಕ ತಿಳಿಸಿದೆ.
ವಾಯುಪ್ರದೇಶದೊಳಗೆ FL 320 ಅಥವಾ 32,000 ಅಡಿಗಳಿಗಿಂತ ಕಡಿಮೆ ಕಾರ್ಯನಿರ್ವಹಿಸದಂತೆ ವಿಮಾನಯಾನ ಸಂಸ್ಥೆಗಳಿಗೆ ತಿಳಿಸಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಕೆಲವು ಷರತ್ತುಗಳಿಗೆ ಒಳಪಟ್ಟು ಒಮಾನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ ಮೇಲೆ ಹಾರಾಟ ನಡೆಸಬಹುದು. ಇರಾನ್‌ನಲ್ಲಿನ ಗುರಿಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ಇತ್ತೀಚೆಗೆ ನಡೆಸಿದ ಮಿಲಿಟರಿ ದಾಳಿಗಳು ನಾಗರಿಕ ವಿಮಾನಯಾನಕ್ಕೆ ಹೆಚ್ಚಿನ ಅಪಾಯದ ವಾತಾವರಣವನ್ನು ಸೃಷ್ಟಿಸಿವೆ ಎಂದು ಡಿಜಿಸಿಎ ಹೇಳಿದೆ.
ಇರಾನ್ ಘೋಷಿಸಿದ ಪ್ರತೀಕಾರದ ಕ್ರಮಗಳು ಬೆದರಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಮತ್ತು ವಿಮಾನ ಕಾರ್ಯಾಚರಣೆಗಳಿಗೆ ಗಂಭೀರ ಅಪಾಯಗಳನ್ನುಂಟುಮಾಡುತ್ತವೆ ಎಂದು ಹೇಳಿದ್ದಾರೆ. ಈ ಸಲಹೆಯು ತಕ್ಷಣದಿಂದ ಜಾರಿಗೆ ಬರುತ್ತದೆ ಮತ್ತು ಮಾರ್ಚ್ 28 ರವರೆಗೆ ಜಾರಿಯಲ್ಲಿರುತ್ತದೆ ಎಂದು ಡಿಜಿಸಿಎ ತಿಳಿಸಿದೆ.
ಇಸ್ರೇಲ್‌ನ ಮೊಸಾದ್ ಗುಪ್ತಚರ ಸಂಸ್ಥೆಗಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಇರಾನ್‌ನಲ್ಲಿ ವ್ಯಕ್ತಿಯೊಬ್ಬನನ್ನು ಗಲ್ಲಿಗೇರಿಸಲಾಗಿದೆ ಎಂದು ಇರಾನ್‌ನ ನ್ಯಾಯಾಂಗ ಬುಧವಾರ ತಿಳಿಸಿದೆ. ನ್ಯಾಯಾಂಗದ ಮಿಜಾನ್ ಸುದ್ದಿಸಂಸ್ಥೆ ಆ ವ್ಯಕ್ತಿಯನ್ನು ಕೌರೋಶ್ ಕೀವಾನಿ ಎಂದು ಗುರುತಿಸಿದೆ. ಆತ ಇಸ್ರೇಲ್‌ನ ಮೊಸಾದ್‌ಗೆ ಸೂಕ್ಷ್ಮ ಸ್ಥಳಗಳ ಚಿತ್ರಗಳು ಮತ್ತು ಮಾಹಿತಿಯನ್ನು ಒದಗಿಸಿದ್ದಾರೆ ಎಂದು ಆರೋಪಿಸಲಾಗಿದೆ.