... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
RCB ಟಿಕೆಟ್ ಬುಕ್ ಮಾಡೋದು ಹೇಗೆ?

RCB ಟಿಕೆಟ್ ಬುಕ್ ಮಾಡೋದು ಹೇಗೆ? ಒಂದು ಟಿಕೆಟ್​ನ ಬೆಲೆ ಎಷ್ಟು..?

ಐಪಿಎಲ್ 2026ರ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ RCB ತಂಡ ತನ್ನ ಅಭಿಮಾನಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ ಪಂದ್ಯಗಳ ಟಿಕೆಟ್ ಹೊಂದಿರುವವರು ‘ನಮ್ಮ ಮೆಟ್ರೋ’ದಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಬೆಂಗಳೂರು, ಐಪಿಎಲ್ 2026ರ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತನ್ನ ಅಭಿಮಾನಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ ಪಂದ್ಯಗಳ ಟಿಕೆಟ್ ಹೊಂದಿರುವವರು ‘ನಮ್ಮ ಮೆಟ್ರೋ’ದಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಅಧಿಕೃತವಾಗಿ ಘೋಷಿಸಲಾಗಿದೆ.
ಉದ್ಘಾಟನಾ ಪಂದ್ಯ ಯಾವಾಗ? ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಉದ್ಘಾಟನಾ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್ಸ್ ಆರ್‌ಸಿಬಿ ತಂಡವು ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಸೆಣಸಾಡುವ ಮೂಲಕ ಟೂರ್ನಿಗೆ ಚಾಲನೆ ನೀಡಲಿದೆ. ಚುನಾವಣೆಗಳ ಹಿನ್ನೆಲೆಯಲ್ಲಿ ಮೊದಲ ಹಂತದ ವೇಳಾಪಟ್ಟಿ ಮಾತ್ರ ಬಿಡುಗಡೆಯಾಗಿದ್ದು, ಏಪ್ರಿಲ್ 5 ರಂದು ಸಿಎಸ್‌ಕೆ ವಿರುದ್ಧ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ? ಟಿಕೆಟ್ ಮಾರಾಟವು ಇನ್ನೆರಡು ದಿನಗಳಲ್ಲಿ ಆರಂಭವಾಗಲಿದ್ದು , ಅಭಿಮಾನಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಟಿಕೆಟ್ ಪಡೆಯಬಹುದು: ಆರ್‌ಸಿಬಿಯ ಅಧಿಕೃತ ವೆಬ್‌ಸೈಟ್ (www.royalchallengers.com) ಅಥವಾ ಆರ್‌ಸಿಬಿ ಆ್ಯಪ್‌ಗೆ ಭೇಟಿ ನೀಡಿ..

 ನೀವು ನೋಡಬಯಸುವ ಪಂದ್ಯವನ್ನು ಆಯ್ಕೆ ಮಾಡಿ. ಸ್ಟೇಡಿಯಂ ಮ್ಯಾಪ್ ಸಹಾಯದಿಂದ ನಿಮಗೆ ಬೇಕಾದ ಸೀಟ್ ಕೆಟಗರಿಯನ್ನು ಆರಿಸಿ. ಆನ್‌ಲೈನ್ ಮೂಲಕ ಪೇಮೆಂಟ್ ಪೂರ್ಣಗೊಳಿಸಿ. ಪೇಮೆಂಟ್ ಯಶಸ್ವಿಯಾದ ನಂತರ ನಿಮ್ಮ ಇಮೇಲ್ ಅಥವಾ ಮೊಬೈಲ್‌ಗೆ ದೃಢೀಕರಣ ಸಂದೇಶ ಬರಲಿದೆ. ಆರ್‌ಸಿಬಿ ಮ್ಯಾನೇಜ್‌ಮೆಂಟ್ ಸ್ಪಷ್ಟಪಡಿಸಿರುವಂತೆ, ಟಿಕೆಟ್‌ಗಳು ಕೇವಲ ಅಧಿಕೃತ ವೆಬ್‌ಸೈಟ್ ಮತ್ತು ಆ್ಯಪ್‌ನಲ್ಲಿ ಮಾತ್ರ ಲಭ್ಯವಿರುತ್ತವೆ. ಯಾವುದೇ ಮೂರನೇ ವ್ಯಕ್ತಿ ಅಥವಾ ಬೇರೆ ಆ್ಯಪ್‌ಗಳಿಂದ ಟಿಕೆಟ್ ಖರೀದಿಸಿ ಮೋಸ ಹೋಗಬೇಡಿ ಎಂದು ಎಚ್ಚರಿಸಲಾಗಿದೆ. ಪಾರ್ಕಿಂಗ್ ಬುಕ್ಕಿಂಗ್: ಟಿಕೆಟ್ ಖರೀದಿಸುವಾಗಲೇ ನಿಮ್ಮ ವಾಹನದ ಪಾರ್ಕಿಂಗ್ ಸ್ಲಾಟ್ ಅನ್ನು ಕೂಡ ಮುಂಗಡವಾಗಿ ಬುಕ್ ಮಾಡಿಕೊಳ್ಳಬಹುದು.

Source : News First

1 hour ago

Home Flash News