... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಬೆಂಗಳೂರಿನ ಖಾದ್ರಿಯಾ ಮಸೀದಿಯಲ್ಲಿ ಈದ್ ಸಂಭ್ರಮ;

ಬೆಂಗಳೂರಿನ ಖಾದ್ರಿಯಾ ಮಸೀದಿಯಲ್ಲಿ ಈದ್ ಸಂಭ್ರಮ; ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಸಿಎಂ!

ಸಿಲಿಕಾನ್ ಸಿಟಿಯಲ್ಲಿ ಈದ್-ಉಲ್-ಫಿತರ್ (ರಂಜಾನ್) ಹಬ್ಬದ ಸಂಭ್ರಮ ಕಳೆಗಟ್ಟಿದೆ. ಈ ಪವಿತ್ರ ದಿನದ ಅಂಗವಾಗಿ ಇಂದು ಬೆಂಗಳೂರಿನ ಬೆನ್ಸನ್ ಟೌನ್‌ನಲ್ಲಿರುವ ಪ್ರಸಿದ್ಧ ಖಾದ್ರಿಯಾ ಮಸೀದಿಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ಶುಭ ಕೋರಿದರು. ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಈದ್-ಉಲ್-ಫಿತರ್ (ರಂಜಾನ್) ಹಬ್ಬದ ಸಂಭ್ರಮ ಕಳೆಗಟ್ಟಿದೆ. ಈ ಪವಿತ್ರ ದಿನದ ಅಂಗವಾಗಿ ಇಂದು ಬೆಂಗಳೂರಿನ ಬೆನ್ಸನ್ ಟೌನ್‌ನಲ್ಲಿರುವ ಪ್ರಸಿದ್ಧ ಖಾದ್ರಿಯಾ ಮಸೀದಿಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ಶುಭ ಕೋರಿದರು. 

ಶಾಸಕ ರಿಜ್ವಾನ್ ಹರ್ಷದ್ ಅವರೊಂದಿಗೆ ಖಾದ್ರಿಯಾ ಮಸೀದಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಪ್ಪು ಬಣ್ಣದ ಟೋಪಿ ಧರಿಸಿ ಗಮನ ಸೆಳೆದರು. ಮಸೀದಿಯ ಮುಂಭಾಗದಲ್ಲಿ ನೆರೆದಿದ್ದ ಸಾವಿರಾರು ಮುಸ್ಲಿಂ ಬಾಂಧವರೊಂದಿಗೆ ಕೈಜೋಡಿಸಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಬೆನ್ಸನ್ ಟೌನ್‌ನ ಖಾದ್ರಿಯಾ ಮಸೀದಿಯಲ್ಲಿ ಈ ಬಾರಿ ಈದ್ ಆಚರಣೆ ಅತ್ಯಂತ ಅದ್ಧೂರಿಯಾಗಿ ನಡೆಯಿತು. ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ಸಾಮೂಹಿಕ ಪ್ರಾರ್ಥನೆ (ನಮಾಜ್) ಸಲ್ಲಿಸಿದರು. ಮಸೀದಿಯಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಭದ್ರತೆಯ ದೃಷ್ಟಿಯಿಂದ ಪೊಲೀಸರು ಮಸೀದಿಯ ಸುತ್ತಮುತ್ತ ಬ್ಯಾರಿಕೇಡ್‌ಗಳನ್ನು ಹಾಕಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

Source : News First

1 hour ago

Home Flash News