... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಬೆಂಗಳೂರಿನ ನಾಗರಿಕರಿಗೆ ಜಲಮಂಡಳಿಯಿಂದ ಗುಡ್​ನ್ಯೂಸ್​;

ಬೆಂಗಳೂರಿನ ನಾಗರಿಕರಿಗೆ ಜಲಮಂಡಳಿಯಿಂದ ಗುಡ್​ನ್ಯೂಸ್​; ಬಿಲ್ ಬಾಕಿ ಇರುವ ಗ್ರಾಹಕರ ಬಡ್ಡಿ ಮನ್ನಾ!

ಬೆಂಗಳೂರು ಜಲಮಂಡಳಿ (BWSSB) ಬಾಕಿ ನೀರಿನ ಬಿಲ್ ಪಾವತಿಸದ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಏಪ್ರಿಲ್‌ನಿಂದ ಮೂರು ತಿಂಗಳ ಅವಧಿಗೆ ಶೇ100ರಷ್ಟು ಬಡ್ಡಿ ಮನ್ನಾ ಯೋಜನೆ ಜಾರಿಗೆ ತರಲಾಗಿದೆ. ಗೃಹ, ವಾಣಿಜ್ಯ, ಕೈಗಾರಿಕಾ ಸೇರಿದಂತೆ ಎಲ್ಲಾ ವರ್ಗದ ಗ್ರಾಹಕರು ತಮ್ಮ ಬಾಕಿ ಬಿಲ್ ಪಾವತಿಸಿ, ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು, ಮಾರ್ಚ್​ 21: ನಾಗರಿಕರಿಗೆ ಜಲಮಂಡಳಿಯಿಂದ ಸಿಹಿಸುದ್ದಿ ಲಭಿಸಿದೆ. ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಬಡ್ಡಿ ಮನ್ನಾ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ. 

  ಮಾಧ್ಯಮ ಪ್ರಕಟಣೆ ಮೂಲಕ ಈ ಮಾಹಿತಿ ನೀಡಿರುವ ಅವರು, ಏಪ್ರಿಲ್ ತಿಂಗಳಿಂದ ಮೂರು ತಿಂಗಳ ಅವಧಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಹೇಳಿದ್ದಾರೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಬಾಕಿ ನೀರಿನ ಬಿಲ್ ಪಾವತಿಸಿದರೆ ಶೇ100ರಷ್ಟು ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ. ಗೃಹ, ವಾಣಿಜ್ಯ ಹಾಗೂ ಕೈಗಾರಿಕಾ ಸೇರಿದಂತೆ ಎಲ್ಲಾ ವರ್ಗದ ಗ್ರಾಹಕರಿಗೂ ಈ ಸೌಲಭ್ಯ ಅನ್ವಯವಾಗಲಿದೆ. ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯ ಎಲ್ಲಾ ಬಳಕೆದಾರರು ಇದರ ಪ್ರಯೋಜನ ಪಡೆಯಬಹುದು.ಈ ವಿಶೇಷ ಅವಕಾಶವನ್ನು ಮುಂದಿನ ಮೂರು ತಿಂಗಳಲ್ಲಿ ಬಳಸಿಕೊಳ್ಳುವಂತೆ ಡಿಸಿಎಂ ಮನವಿ ಮಾಡಿದ್ದಾರೆ.

Source : TV9 Kannada

1 hour ago

Home Flash News