Donald Trump; ಹೊರ್ಮುಜ್ ತೆರೆಯಿರಿ ಇಲ್ಲದಿದ್ದರೆ ವಿದ್ಯುತ್ ಸ್ಥಾವರಗಳ ನಾಶ!
ವಾಷಿಂಗ್ಟನ್: 48 ಗಂಟೆಗಳ ಒಳಗೆ ಆಯಕಟ್ಟಿನ ನಿರ್ಣಾಯಕ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯದಿದ್ದರೆ ವಿದ್ಯುತ್ ಮೂಲಸೌಕರ್ಯದ ಮೇಲೆ ದಾಳಿ ನಡೆಸುವುದಾಗಿ ಶನಿವಾರ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಬೆದರಿಕೆ ಹಾಕಿದ್ದಾರೆ. ಪರ್ಷಿಯನ್ ಕೊಲ್ಲಿಯನ್ನು ಜಾಗತಿಕ ಮಾರುಕಟ್ಟೆಗಳಿಗೆ ಸಂಪರ್ಕಿಸುವ ಕಿರಿದಾದ ಕಾರಿಡಾರ್ ಆಗಿರುವ ಹೊರ್ಮುಜ್ ಜಲಸಂಧಿಯು ವಿಶ್ವದ ಅತ್ಯಂತ ಪ್ರಮುಖ ಹಡಗು ಮಾರ್ಗಗಳಲ್ಲಿ ಒಂದಾಗಿದ್ದು, ಜಾಗತಿಕ ತೈಲ ಪೂರೈಕೆಯ ಸರಿಸುಮಾರು ಐದನೇ ಒಂದು ಭಾಗ ಹೊಂದಿದ್ದು ಸದ್ಯ ಇರಾನ್ ಹಿಡಿತದಲ್ಲಿ ಇದ್ದು ಜಾಗತಿಕವಾಗಿ ಭಾರೀ ಪರಿಣಾಮ ಬೀರಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ , ನಿರ್ದಿಷ್ಟ ಸಮಯದೊಳಗೆ ಜಲಮಾರ್ಗವು ಸಂಪೂರ್ಣವಾಗಿ, ಬೆದರಿಕೆಯಿಲ್ಲದೆ ತೆರೆಯದಿದ್ದರೆ, ಅಮೆರಿಕವು ಇರಾನಿನ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುತ್ತದೆ. ಮೊದಲು ಅತ್ಯಂತ ದೊಡ್ಡದರೊಂದಿಗೆ ಪ್ರಾರಂಭವಾಗಲಿದೆ" ಎಂದು ಟ್ರಂಪ್ ಬೆದರಿಕೆ ಹಾಕಿದ್ದಾರೆ. ಯುದ್ಧವು ನಾಲ್ಕನೇ ವಾರಕ್ಕೆ ಕಾಲಿಡುತ್ತಿದ್ದಂತೆ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಸಂಘರ್ಷವು ಹೆಚ್ಚು ಅಪಾಯಕಾರಿ ಹಂತವನ್ನು ಪ್ರವೇಶಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಈಗಾಗಲೇ ಭಾರಿ ನಷ್ಟವಾಗಿದ್ದು, ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಗಳು ಪ್ರಾರಂಭವಾದಾಗಿನಿಂದ ಇರಾನ್‌ನಲ್ಲಿ 2,000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದು ಕೊಂಡಿದ್ದಾರೆ, ಇರಾನ್ ನ ಪ್ರತಿದಾಳಿಯಲ್ಲಿ ಇಸ್ರೇಲ್ ನಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. 5