... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ:

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗಳು ಕಾಂಗ್ರೆಸ್​ಗೆ ಕಠಿಣ ಸವಾಲು ಇದೆ. ಈ ಪಕ್ಷ ಕೇರಳದಲ್ಲಿ ಮಾತ್ರವೇ ಗೆಲುವು ಸಾಧಿಸುವ ಸಾಧ್ಯತೆ ಹೊಂದಿದೆ. ಅಸ್ಸಾಂ​ನಲ್ಲಿ ಬಿಜೆಪಿ ಜೊತೆ ನೇರ ಪೈಪೋಟಿಯಲ್ಲಿದೆ. ಹೀಗಾಗಿ, ವಿಧಾನಸಭೆ ಚುನಾವಣೆಗಳು ಕಾಂಗ್ರೆಸ್​ಗೆ ಮಹತ್ವ ಎಂದು ಹೇಳುವುದು ಅತಿಶಯೋಕ್ತಿ ಎನಿಸಬಹುದು. ಮಾರ್ಚ್ 15 ರಂದು ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರು ಎಕ್ಸ್‌ನಲ್ಲಿ ಪೋಸ್ಟ್, ಹಂಚಿಕೊಳ್ಳುವ ಮೂಲಕ ಈ ಚುನಾವಣೆಗಳಿಂದ ಕಾಂಗ್ರೆಸ್ ಏನನ್ನು ನಿರೀಕ್ಷಿಸಬಹುದು ಎಂಬುದನ್ನು ಒಪ್ಪಿಕೊಂಡಿದ್ದಾರೆ.

 ಪಕ್ಷವು ಎಲ್ಲೆಡೆ ವಿಜಯಶಾಲಿಯಾಗುತ್ತದೆ ಎಂದು ಅವರು ಹೇಳಿದ್ದರು. ಆದರೆ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯ ಬಗ್ಗೆ ಯಾವುದೇ ನಿರ್ದಿಷ್ಟ ಉಲ್ಲೇಖ ಮಾಡದ ಅವರು ಕೇರಳದಲ್ಲಿ 100+ ಸ್ಥಾನಗಳ ಅದ್ಭುತ ಗೆಲುವು ಸಿಗಲಿದೆ ಎಂದು ಭವಿಷ್ಯ ನುಡಿದಿದ್ದರು. ತಮಿಳುನಾಡಿನಲ್ಲಿ ಡಿಎಂಕೆಯ ಎಂ. ಕೆ. ಸ್ಟಾಲಿನ್ ನೇತೃತ್ವದ ಬಂಡೆಯಷ್ಟೇ ದೃಢವಾದ ಮೈತ್ರಿಕೂಟ ಅಧಿಕಾರಕ್ಕೆ ಮರಳುತ್ತದೆ ಎಂದು ಹೇಳಿದ್ದರು. ರಾಹುಲ್ ಗಾಂಧಿ ಸಹ ಕೇರಳದ ಬಗ್ಗೆ ಮಾತನಾಡಿದರೆ ಹೊರತು ಉಳಿದ ರಾಜ್ಯಗಳ ಬಗ್ಗೆ ಮೌನವಹಿಸಿದ್ದರು. ಕೇರಳದ ಬಗ್ಗೆ ಬಹಳ ಭರವಸೆ ಇಟ್ಟುಕೊಂಡಿರುವ ಕಾಂಗ್ರೆಸ್, ಪಿಣರಾಯಿ ವಿಜಯನ್ ಅವರ 10 ವರ್ಷಗಳ ಆಡಳಿತದ ವಿರೋಧಿ ಅಲೆಯ ಲಾಭ ಪಡೆಯುವ ವಿಶ್ವಾಸದಲ್ಲಿದೆ. ಆದರೆ, ಎಲ್‌ಡಿಎಫ್ ಲೋಪಗಳನ್ನು ಎತ್ತಿತೋರಿಸಿ ಅದರ ಲಾಭ ಪಡೆಯುವ ಅವಕಾಶವನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

Source : Prajavani

1 hour ago

Home Flash News