... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಮಾ.28ರಂದು MMNL ನಿರ್ದೇಶಕ ಟಿ. ಸತೀಶ್ ಯು.

ಮಾ.28ರಂದು MMNL ನಿರ್ದೇಶಕ ಟಿ. ಸತೀಶ್ ಯು. ಪೈ ಅವರಿಗೆ ಗೌರವ 'ಡಿ.ಲಿಟ್' ಪ್ರದಾನ

ಮಂಗಳೂರು: ನಗರದ ಪ್ರತಿಷ್ಠಿತ ಶ್ರೀನಿವಾಸ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವವು ಮಾ. 28ರಂದು ಬೆಳಿಗ್ಗೆ 10 ಗಂಟೆಗೆ ಮುಕ್ಕದ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಮಣಿಪಾಲ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್ ನಿರ್ದೇಶಕರಾದ ಟಿ. ಸತೀಶ್ ಯು. ಪೈ ಅವರಿಗೆ ಪ್ರತಿಷ್ಠಿತ 'ಡಾಕ್ಟರ್ ಆಫ್ ಲಿಟರೇಚರ್' (ಡಿ.ಲಿಟ್) ಗೌರವ ಪದವಿ ನೀಡಿ ಸನ್ಮಾನಿಸಲಾಗುವುದು ಎಂದು ರಿಜಿಸ್ಟ್ರಾರ್ ಡಾ. ಶ್ರೀನಿವಾಸ ಮಯ್ಯ ತಿಳಿಸಿದ್ದಾರೆ. ಮಂಗಳೂರು ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಘವೇಂದ್ರ ಶ್ರೀನಿವಾಸ್ ಭಟ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಘಟಿಕೋತ್ಸವ ಮುಂದುವರಿದ.

 ಕಾರ್ಯಕ್ರಮದಲ್ಲಿ ಮಂಗಳೂರು ಕೆಐಒಸಿಎಲ್ ಲಿಮಿಟೆಡ್‌ ಉತ್ಪಾದನಾ ಹಾಗು ಯೋಜನಾ ವಿಭಾಗದ ಅಧ್ಯಕ್ಷರು, ನಿರ್ದೇಶಕರು ಮತ್ತು ಹಣಕಾಸು ವಿಭಾಗದ ಹೆಚ್ಚುವರಿ ಹೊಣೆಗಾರಿಕೆ ಮತ್ತು ನಿರ್ದೇಶಕರಾದ ಗಾಂತಿ ವೆಂಕಟ್ ಕಿರಣ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.‌ಶ್ರೀನಿವಾಸ ಮಯ್ಯ ಅವರು ಶುಕ್ರವಾರದಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಘಟಿಕೋತ್ಸವದಲ್ಲಿ 2769 ಪದವೀಧರರು (ಸ್ನಾತಕೋತ್ತರ -626, ಪದವಿ- 2023) ಪ್ರಮಾಣಪತ್ರ ಸ್ವೀಕರಿಸಲಿದ್ದು, ವಿಶ್ವವಿದ್ಯಾಲಯವು ವಿವಿಧ ಕಾರ್ಯಕ್ರಮಗಳಿಗೆ 236 ರ‍್ಯಾಂಕ್ ಗಳನ್ನು ಪ್ರಕಟಿಸಿದೆ ಮತ್ತು 48 ಪದವೀಧರರು ಘಟಿಕೋತ್ಸವದ ಸಮಯದಲ್ಲಿ ಕುಲಾಧಿಪತಿಗಳ ಚಿನ್ನದ ಪದಕವನ್ನು ಸ್ವೀಕರಿಸಲಿದ್ದಾರೆ. ಘಟಿಕೋತ್ಸವದಲ್ಲಿ 1 ಡಿ.ಎಸ್‌ಸಿ., 1 ಡಿ.ಲಿಟ್. ಮತ್ತು 118 Ph. D ಪದವಿ ಪ್ರದಾನಿಸಲಾಗುವುದು.

Source : Udayavani

2 hours ago

Home Flash News