... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಮೋದಿ ಹಾಗೂ ನಾನು ಯಾವುದೇ ಕೆಲಸ ಮಾಡಲು ಶಕ್ತರು: ಡೊನಾಲ್ಡ್ ಟ್ರಂಪ್

ಮೋದಿ ಹಾಗೂ ನಾನು ಯಾವುದೇ ಕೆಲಸ ಮಾಡಲು ಶಕ್ತರು: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್‌: ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಎಂಥದ್ದೇ ಕೆಲಸವಾದರೂ ನಾನು ಮತ್ತು ಮೋದಿ ಸೇರಿದರೆ ಅದು ಸಾಧ್ಯವಾಗುತ್ತದೆ’ ಎಂದಿದ್ದಾರೆ. ಟ್ರಂಪ್‌ ಅವರ ಈ ಸಂದೇಶವನ್ನು ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿ ಹಂಚಿಕೊಂಡಿದೆ. ‘ಭಾರತದೊಂದಿಗಿನ ನಮ್ಮ ಉತ್ತಮ ಸಂಬಂಧವು ಮುಂದಿನ ದಿನಗಳಲ್ಲಿ ಇನ್ನಷ್ಟು ಬಲಗೊಳ್ಳಲಿದೆ. ಪ್ರಧಾನಿ ಮೋದಿ ಮತ್ತು ನಾನು ಸೇರಿದರೆ ಎಂಥದ್ದೇ ಕೆಲಸವಾದರೂ ಯಶಸ್ವಿಯಾಗುತ್ತದೆ’ ಎಂದು ಹೇಳಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅವರು ಮಂಗಳವಾರ ಟ್ರಂಪ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಇದರ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ.
‌‘ಉದ್ವಿಗ್ನತೆ ತಗ್ಗಿಸಿ, ಶಾಂತಿ ಮರುಸ್ಥಾಪಿಸುವುದನ್ನು ಭಾರತ ಬೆಂಬಲಿಸುತ್ತದೆ. ಹೊರ್ಮುಜ್‌ ಜಲಸಂಧಿ ಎಲ್ಲರಿಗೂ ಮುಕ್ತವಾಗಿಸುವುದು ಇಡೀ ಜಗತ್ತಿಗೆ ಅತ್ಯಗತ್ಯವಾಗಿದೆ. ಶಾಂತಿ ಮತ್ತು ಸ್ಥಿರತೆಯ ಪ್ರಯತ್ನಗಳ ಕುರಿತು ಪರಸ್ಪರ ಸಂಪರ್ಕದಲ್ಲಿರಲು ನಾವು ಒಪ್ಪಿಕೊಂಡಿದ್ದೇವೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹೊರ್ಮುಜ್‌ ಜಲಸಂಧಿ ಮುಕ್ತವಾಗಿಸುವ ಪ್ರಾಮುಖ್ಯತೆಯ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಸೆರ್ಗಿಯೋ ಗೋರ್ ತಿಳಿಸಿದ್ದಾರೆ.

Source : Prajavani

1 hour ago

Home Flash News