ದಾವಣಗೆರೆ ದಕ್ಷಿಣ ಉಪಚುನಾವಣೆ: ಕಣದಿಂದ ಹಿಂದಕ್ಕೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಪಕ್ಷೇತರ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಹೇಳಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು 'ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಮುಸ್ಲಿಮರಿಗೆ ಟಿಕೆಟ್ ನೀಡಲಿಲ್ಲ ಎಂದು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾತಿಗೆ ಮನ್ನಣೆ ನೀಡಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದರು. ಪಕ್ಷ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಅವರಿಗೆ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಿಕೊಂಡು ಬೆಂಗಳೂರಿಗೆ ಕರೆತರುವೆ ಎಂದು ಭರವಸೆ ನೀಡಿದರು.