... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಪೆಟ್ರೋಲ್‌, ಡೀಸೆಲ್‌ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ 10 ರು.ನಷ್ಟು ಕಡಿತ

ಪೆಟ್ರೋಲ್‌, ಡೀಸೆಲ್‌ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ 10 ರು.ನಷ್ಟು ಕಡಿತ

ನವದೆಹಲಿ : ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆಯಾಗುತ್ತಿರುವ ತೈಲ ದರದ ಬಿಸಿ ತೈಲ ಕಂಪನಿಗಳಿಗೆ ತಟ್ಟುವುದನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ವಿಧಿಸುತ್ತಿರುವ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ತಲಾ 10 ರು.ನಷ್ಟು ಕಡಿತಗೊಳಿಸಿದೆ.

ವಿಶೇಷ ಹೆಚ್ಚುವರಿ ಅಬಕಾರಿ ಸುಂಕವು ತೈಲ ಮಾರುಕಟ್ಟೆ ಕಂಪನಿಗಳು ಸರ್ಕಾರಕ್ಕೆ ಪಾವತಿಸುವ ತೆರಿಗೆಯಾಗಿದೆ. ಆ ದರವು ಈಗ ಇಳಿದಿದೆ. ಹೋಗಾಗಿ ಇದರ ಇಳಿಕೆಯಿಂದ ಬಂಕ್‌ಗಳಲ್ಲಿನ ದರ ಇಳಿಯುವುದಿಲ್ಲ. ಇಳಿಕೆಯ ನೇರ ಲಾಭವು ಗ್ರಾಹಕರ ಬದಲು, ತೈಲ ಮಾರಾಟ ಸಂಸ್ಥೆಗಳಿಗೆ ಸಿಗಲಿದೆ. ಅಂದರೆ ಇಳಿಕೆಯಾದ ಸುಂಕದ ಮೊತ್ತವನ್ನು ತೈಲ ಕಂಪನಿಗಳು ಗರಿಷ್ಠ ಮಾರಾಟ ದರದಲ್ಲೇ ಸರಿದೂಗಿಸುತ್ತವೆ. ವರ್ಷವೊಂದರಲ್ಲಿ ದೇಶದಲ್ಲಿ 17,500 ಕೋಟಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಮಾರಾಟವಾಗುತ್ತಿದ್ದು, ಈ ಸುಂಕ ಕಡಿತದ ನಿರ್ಧಾರದಿಂದ ಸರ್ಕಾರಕ್ಕೆ ವಾರ್ಷಿಕ 1.75 ಲಕ್ಷ ಕೋಟಿ ರು. ಆದಾಯ ನಷ್ಟ ಆಗಲಿದೆ ಎಂದು ಅಂದಾಜಿಸಲಾಗಿದೆ.

Source : Asianet News

1 hour ago

Home Flash News