... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಬಿಹಾರ ರಾಜಕೀಯದಲ್ಲಿ ಸಂಚಲನ..

ಬಿಹಾರ ರಾಜಕೀಯದಲ್ಲಿ ಸಂಚಲನ.. ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ!

ಬಿಹಾರ ರಾಜಕೀಯದಲ್ಲಿ ದಶಕಗಳ ಕಾಲ ಅಧಿಪತ್ಯ ಸ್ಥಾಪಿಸಿದ್ದ ‘ಸುಶಾಸನ್ ಬಾಬು’ ನಿತೀಶ್ ಕುಮಾರ್ ಅವರ ಸುದೀರ್ಘ ಪಯಣದಲ್ಲಿ ಮಹತ್ವದ ಬದಲಾವಣೆ ಸಂಭವಿಸಿದೆ. ಇವತ್ತು ನಿತೀಶ್ ಕುಮಾರ್ ಬಿಹಾರ ವಿಧಾನ ಪರಿಷತ್ (MLC) ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜಕೀಯದಲ್ಲಿ ದಶಕಗಳ ಕಾಲ ಅಧಿಪತ್ಯ ಸ್ಥಾಪಿಸಿದ್ದ ‘ಸುಶಾಸನ್ ಬಾಬು’ ನಿತೀಶ್ ಕುಮಾರ್ ಅವರ ಸುದೀರ್ಘ ಪಯಣದಲ್ಲಿ ಮಹತ್ವದ ಬದಲಾವಣೆ ಸಂಭವಿಸಿದೆ. ಇವತ್ತು ನಿತೀಶ್ ಕುಮಾರ್ ಬಿಹಾರ ವಿಧಾನ ಪರಿಷತ್ (MLC) ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಮಾರ್ಚ್ 16 ರಂದು ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಸಾಂವಿಧಾನಿಕ ನಿಯಮಗಳ ಪ್ರಕಾರ, ಯಾವುದೇ ವ್ಯಕ್ತಿ ಸಂಸತ್ತಿಗೆ (ಲೋಕಸಭೆ ಅಥವಾ ರಾಜ್ಯಸಭೆ) ಆಯ್ಕೆಯಾದ 14 ದಿನಗಳ ಒಳಗೆ ತಮ್ಮ ಹಳೆಯ ಶಾಸಕಾಂಗ ಹುದ್ದೆಗೆ ರಾಜೀನಾಮೆ ನೀಡಬೇಕು. ಈ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಈ ನಿರ್ಧಾರ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ. ಇದು ಬಿಹಾರದ ರಾಜಕೀಯ ಭೂಪಟದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ನಾಂದಿ ಹಾಡಲಿದೆ. 2005ರ ನವೆಂಬರ್‌ನಿಂದ ಸತತವಾಗಿ ಬಿಹಾರದ ಚುಕ್ಕಾಣಿ ಹಿಡಿದಿದ್ದ ನಿತೀಶ್, 2006 ರಿಂದ 2026 ರವರೆಗೆ ಸತತ ನಾಲ್ಕು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 

ಇದೀಗ ಅವರು ರಾಜ್ಯ ರಾಜಕಾರಣ ಬಿಟ್ಟು ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿದ್ದಾರೆ. ಮುಂದಿನ ಸಿಎಂ ಯಾರು? ನಿತೀಶ್ ಕುಮಾರ್ ನಿರ್ಗಮನದ ನಂತರ ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಈಗ ಎಲ್ಲೆಡೆ ಕಾಡುತ್ತಿದೆ. ಹತ್ತಾರು ಹೆಸರುಗಳು ಕೇಳಿಬರುತ್ತಿದ್ದರೂ, ಎಲ್ಲರ ಗಮನ ಹರಿಯುತ್ತಿರುವುದು ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರ ಮೇಲೆ. ಇದುವರೆಗೆ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದ ನಿಶಾಂತ್ ಕುಮಾರ್, ಇತ್ತೀಚೆಗಷ್ಟೇ ನಿತೀಶ್ ಕುಮಾರ್ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಅಧಿಕೃತವಾಗಿ ಜನತಾದಳ ಯುನೈಟೆಡ್ (JD-U) ಪಕ್ಷವನ್ನು ಸೇರಿಕೊಂಡಿದ್ದಾರೆ.

Source : News First

2 hours ago

Home Flash News