Rahul Gandhi: ಕೇರಳದ ಕಮ್ಯೂನಿಸ್ಟ್ ಸರ್ಕಾರ ಬಿಜೆಪಿಯ ಸಹಕಾರದಿಂದ ನಡೆಯುತ್ತಿದೆ; ರಾಹುಲ್ ಗಾಂಧಿ ಗಂಭೀರ ಆರೋಪ
ತಿರುವನಂತಪುರಂ: ಮುಂಬರುವ (Kerala Assembly Election 2026) ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (BJP) ಪರೋಕ್ಷವಾಗಿ ಎಡ ಪ್ರಜಾಸತ್ತಾತ್ಮಕ ರಂಗ (LDF) ಅನ್ನು ಬೆಂಬಲಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸೋಮವಾರ ಆರೋಪಿಸಿದ್ದಾರೆ. ಅಡೂರ್‌ನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಲೋಕಸಭೆಯ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಚುನಾವಣಾ ಸ್ಪರ್ಧೆಯನ್ನು ಯುಡಿಎಫ್ ಮತ್ತು ‘ಸಿಪಿಐ(ಎಂ)-ಬಿಜೆಪಿ ಮೈತ್ರಿಯ ನಡುವಿನ ಹೋರಾಟ’ ಎಂದು ಬಣ್ಣಿಸಿದರು.
ಕೇಂದ್ರೀಯ ಸಂಸ್ಥೆಗಳು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡಿವೆ, ಆದರೆ ಎಲ್‌ಡಿಎಫ್ ವ್ಯಕ್ತಿಗಳು ಅಂತಹ ಪರಿಶೀಲನೆಯನ್ನು ಎದುರಿಸುವುದಿಲ್ಲ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾನು 36 ಪ್ರಕರಣಗಳನ್ನು ಎದುರಿಸಿದ್ದೇನೆ ಮತ್ತು 55 ಗಂಟೆಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟಿದ್ದೇನೆ. ಆದರೆ ಕೇರಳ ಮುಖ್ಯಮಂತ್ರಿ ಅಥವಾ ಎಲ್‌ಡಿಎಫ್ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗಾಂಧಿ ಹೇಳಿದರು.
ಶಬರಿಮಲೆ ಬಗ್ಗೆ ಪ್ರಧಾನಿ ಮೋದಿ ಮೌನ
ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ರಾಹುಲ್ ಗಾಂಧಿ, ಇತ್ತೀಚೆಗೆ ಪಾಲಕ್ಕಾಡ್‌ಗೆ ಭೇಟಿ ನೀಡಿದ್ದಾಗ ಶಬರಿಮಲೆ ಬಗ್ಗೆ ಮೌನವಾಗಿದ್ದಕ್ಕಾಗಿ ಅವರನ್ನು ಟೀಕಿಸಿದರು.