... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ರಥೋತ್ಸವದಲ್ಲಿ ಗರುಡ ದರ್ಶನ

ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ರಥೋತ್ಸವದಲ್ಲಿ ಗರುಡ ದರ್ಶನ; ಪುಳಕಿತರಾದ ಭಕ್ತರು

ಮೈಸೂರು: ಗರಳಪುರಿ, ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಪಡೆದ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ಮಹಾರಥೋತ್ಸವವು ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಮೊದಲು ಗಣಪತಿ ರಥ, ನಂತರ ಶ್ರೀಕಂಠೇಶ್ವರ ಸ್ವಾಮಿ ದೊಡ್ಡರಥ, ಸುಬ್ರಹ್ಮಣ್ಯ, ಚಂಡಿಕೇಶ್ವರಸ್ವಾಮಿ, ಕೊನೆಯಲ್ಲಿ ಪಾರ್ವತಮ್ಮನವರ ರಥಗಳು 1.5 ಕಿ.ಮೀ. ರಥ ಬೀದಿಯಲ್ಲಿ ಸಂಚರಿಸಿದವು. ಲಕ್ಷಾಂತರ ಭಕ್ತರು ರಥಕ್ಕೆ ಹಣ್ಣು-ಧವನ ಎಸೆದು ಹರಕೆ ತೀರಿಸಿಕೊಂಡರು. ರಥೋತ್ಸವದ ಸಮಯಕ್ಕೆ ಸರಿಯಾಗಿ ಬಂದ ಗರುಡ ಪಕ್ಷಿಯನ್ನು ಭಕ್ತರು ಕಣ್ತುಂಬಿಕೊಂಡರು.
ರಥೋತ್ಸವದ ವೇಳೆ ಗರುಡ ಆಗಮನದ ದೃಶ್ಯವನ್ನು ಭಕ್ತರು ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದು, ವಿಡಿಯೋ ವೈರಲ್ ಆಗುತ್ತಿದೆ. Suresh Kumar Belli ಎಂಬವರು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಗರುಡ ಆಗಮನದ ವಿಡಿಯೋ ಹಂಚಿಕೊಂಡಿದ್ದು, ಇಲ್ಲಿಯವರೆಗೆ 1.68 ಲಕ್ಷಕ್ಕೂ ಅಧಿಕ ವ್ಯೂವ್, 8 ಸಾವಿರಕ್ಕೂ ಹೆಚ್ಚು ಲೈಕ್ಸ್ ಪಡೆದುಕೊಂಡಿದೆ. ನಂಜನಗೂಡು ಜಾತ್ರೆಯಲ್ಲಿ ಹೃದಯಾಘಾತಕ್ಕೆ ವ್ಯಕ್ತಿ ಬಲಿ ದಕ್ಷಿಣ ಕಾಶಿ ಖ್ಯಾತಿಯ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರೆಗೆ ಬಂದಿದ್ದ ಭಕ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರ ಜರುಗಿದೆ. 

ಬೆಂಗಳೂರು ಗ್ರಾಮಾಂತರ ಮಾಗಡಿ ನಿವಾಸಿ ನಂಜುಂಡಸ್ವಾಮಿ (58) ಮೃತ ದುರ್ದೈವಿ. ಜಾತ್ರೆಗಾಗಿ ಮಾಗಡಿಯಿಂದ ಆಗಮಿಸಿದ್ದ ನಂಜುಂಡಸ್ವಾಮಿ. ಕಿಡ್ನಿ ವೈಫಲ್ಯಕ್ಕೆ ತುತ್ತಾಗಿ ಡಯಾಲಿಸಿಸ್ ಪಡೆಯುತ್ತಿದ್ದರು ಎನ್ನಲಾಗಿದ್ದು, ಜಾತ್ರೆಯ ದೊಡ್ಡ ರಥ ಚಲಿಸುವ ವೇಳೆ ದೇವಾಲಯದ ಮೂಲೆ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Source : Asianet News

1 hour ago

Home Flash News