ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಮನೆಗೆ ಮರಳಿದ ಸೋನಿಯಾ ಗಾಂಧಿ
ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಅವರನ್ನು ಇಲ್ಲಿನ ಶ್ರೀ ಗಂಗಾರಾಮ್ ಆಸ್ಪತ್ರೆಯಿಂದ ಮಂಗಳವಾರ ಬೆಳಿಗ್ಗೆ ಮನೆಗೆ ಕಳುಹಿಸಲಾಗಿದೆ. ಸೋನಿಯಾ ಅವರ ರಕ್ತದಲ್ಲಿ ಸೋಂಕು (Systemic Infection) ಕಾಣಿಸಿಕೊಂಡಿತ್ತು. ಅದಕ್ಕೆ ಚಿಕಿತ್ಸೆ ನೀಡಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ಮುಂದಿನ ಚಿಕಿತ್ಸೆಯನ್ನು ಮನೆಯಲ್ಲಿಯೇ ನೀಡಲಾಗುವುದು ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ.ಅಜಯ್ ಸ್ವರೂಪ್ ಅವರು ತಿಳಿಸಿದ್ದಾರೆ. ಜ್ವರದಿಂದ ಮಾರ್ಚ್ 24ರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಏಳು ದಿನಗಳು ಆಸ್ಪತ್ರೆಯಲ್ಲಿ ಕಳೆದಿದ್ದರು.