... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಪತ್ನಿ ಕೊಲೆ ಪ್ರಕರಣ: LPG ಬುಕಿಂಗ್‌ನಿಂದ ಸಿಕ್ಕಿಬಿದ್ದ ಮಾಜಿ ಸೇನಾ ಕ್ಯಾಪ್ಟನ್!

ಪತ್ನಿ ಕೊಲೆ ಪ್ರಕರಣ: LPG ಬುಕಿಂಗ್‌ನಿಂದ ಸಿಕ್ಕಿಬಿದ್ದ ಮಾಜಿ ಸೇನಾ ಕ್ಯಾಪ್ಟನ್!

ಭೋಪಾಲ್: ಪತ್ನಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭಾರತೀಯ ಸೇನೆಯ ಮಾಜಿ ಕ್ಯಾಪ್ಟನ್ ಸಂದೀಪ್ ತೋಮರ್‌ನನ್ನು ಮಧ್ಯಪ್ರದೇಶದ ಪಾಂಡುರ್ನಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ಮಾಡಿದ್ದರಿಂದ ಸಂದೀಪ್ ಇರುವಿಕೆಯನ್ನು ಪತ್ತೆಹಚ್ಚಲು ಪೊಲೀಸರಿಗೆ ನೆರವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೋಮರ್‌ನನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದ್ದು, ಆತನನ್ನು ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ. ಏನಿದು ಘಟನೆ? 2013ರಲ್ಲಿ ತೋಮರ್ ಅಬೋಹರ್‌ನಲ್ಲಿ ನಿಯೋಜನೆಗೊಂಡಿದ್ದಾಗ ಪತ್ನಿ ಶ್ವೇತಾ ಸಿಂಗ್‌ ಅವರನ್ನು ಹತ್ಯೆ ಮಾಡಿರುವುದಾಗಿ ಆರೋಪಿಸಲಾಗಿದೆ. ಘಟನೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ತೋಮರ್ ಪ್ರಯತ್ನಿಸಿದ್ದರೂ, ವಿವರವಾದ ತನಿಖೆಯ ನಂತರ ಇದು ಯೋಜಿತ ಕೊಲೆ ಎಂಬುದು ಬಹಿರಂಗವಾಗಿತ್ತು. 2014ರಲ್ಲಿ ವಿಚಾರಣಾ ನ್ಯಾಯಾಲಯವು ತೋಮರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

 2019ರಲ್ಲಿ ತೋಮರ್‌ಗೆ ಜಾಮೀನು ನೀಡಲಾಗಿತ್ತು. 2022ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೋಮರ್‌ಗೆ ವಿಧಿಸಿದ್ದ ಶಿಕ್ಷೆಯನ್ನು ಎತ್ತಿಹಿಡಿದಿತ್ತು. ಆದರೆ, ತೋಮರ್ ಶರಣಾಗದೆ ತಲೆಮರೆಸಿಕೊಂಡಿದ್ದರು. ಪೊಲೀಸರಿಂದ ತಪ್ಪಿಸಿಕೊಳ್ಳಲು ಆತ ನಿರಂತರವಾಗಿ ವಾಸಸ್ಥಳ ಮತ್ತು ಗುರುತನ್ನು ಬದಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ಕಿಬಿದ್ದಿದ್ದು ಹೇಗೆ? ಫಾಜಿಲ್ಕಾ ಪೊಲೀಸರು ತೋಮರ್‌ನ ಪಾನ್ ಕಾರ್ಡ್‌ಗೆ ಲಿಂಕ್ ಆಗಿದ್ದ ಬ್ಯಾಂಕ್ ಖಾತೆಯನ್ನು ಪತ್ತೆಹಚ್ಚಿದಾಗ ಮಹತ್ವದ ಸುಳಿವು ಸಿಕ್ಕಿತ್ತು. ಈ ಖಾತೆಯನ್ನು ಅವರು ಎಲ್‌ಪಿಜಿ ಸಿಲಿಂಡರ್ ಬುಕ್ ಮಾಡಲು ಬಳಸಿದ್ದರು. ಈ ಸುಳಿವಿನ ಆಧಾರದ ಮೇಲೆ ಪೊಲೀಸರು ಮಧ್ಯಪ್ರದೇಶದಲ್ಲಿ ಆತನ ಇರುವಿಕೆಯನ್ನು ಪತ್ತೆಹಚ್ಚಿದ್ದು, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತೋಮರ್‌ನ ಬ್ಯಾಂಕ್ ಸ್ಟೇಟ್‌ಮೆಂಟ್ ಪರಿಶೀಲನೆ ನಡೆಸಿದಾಗ ಆತ ಪಾಂಡುರ್ನಾದ ಏಜೆನ್ಸಿಯಿಂದ ಎಲ್‌ಪಿಜಿ ಸಿಲಿಂಡರ್ ಪಡೆಯುತ್ತಿದ್ದ ವಿಚಾರ ತಿಳಿದುಬಂದಿತ್ತು. ತಕ್ಷಣವೇ ಗ್ಯಾಸ್ ಏಜೆನ್ಸಿಯನ್ನು ಸಂಪರ್ಕಿಸಿದ ಪೊಲೀಸರು, ಆತ ನೀಡಿದ್ದ ವಿಳಾಸವನ್ನು ಪಡೆದು ಕಾರ್ಯಾಚರಣೆ ನಡೆಸಿದ್ದಾರೆ.

Source : Prajavani

1 hour ago

Home Flash News