... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಅಸ್ಸಾಂನ ಚಹಾ ತೋಟದಲ್ಲಿ ಮಹಿಳಾ ಕಾರ್ಮಿಕರೊಂದಿಗೆ ಎಲೆ ಕಿತ್ತ ಪ್ರಧಾನಿ ಮೋದಿ

ಅಸ್ಸಾಂನ ಚಹಾ ತೋಟದಲ್ಲಿ ಮಹಿಳಾ ಕಾರ್ಮಿಕರೊಂದಿಗೆ ಎಲೆ ಕಿತ್ತ ಪ್ರಧಾನಿ ಮೋದಿ

ಗುವಾಹಟಿ: ಅಸ್ಸಾಂನ ದಿಬ್ರುಗಢ ಜಿಲ್ಲೆಯ ಚಹಾ ತೋಟಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಹಾ ಎಲೆಗಳನ್ನು ಕಿತ್ತಿದ್ದಾರೆ. ಅಸ್ಸಾಂ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರ‍್ಯಾಲಿಯಲ್ಲಿ ಭಾಗವಹಿಸಲು ಮೋದಿ ತೆರಳಿದ್ದರು. ಈ ವೇಳೆ ಮನೋಹರಿ ಟೀ ಎಸ್ಟೇಟ್‌ಗೆ ಭೇಟಿ ನೀಡಿ, ಅಲ್ಲಿನ ಮಹಿಳಾ ಕಾರ್ಮಿಕರೊಂದಿಗೆ ಸಂಭಾಷಣೆ ನಡೆಸಿದ್ದಾರೆ. ಚಹಾ ತೋಟಗಳನ್ನು ಹೊಂದಿರುವ ಪ್ರತಿಯೊಂದು ಕುಟುಂಬದ ಪ್ರಯತ್ನಗಳ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ. ಅವರ ಕಠಿಣ ಪರಿಶ್ರಮವು ಅಸ್ಸಾಂನ ಘನತೆಯನ್ನು ಹೆಚ್ಚಿಸಿದೆ ಎಂದು ಮೋದಿ, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದೇ ವೇಳೆ ಮಹಿಳಾ ಕಾರ್ಮಿಕರೊಂದಿಗೆ ಅವರು ಚಹಾ ಎಲೆಗಳನ್ನು ಕಿತ್ತು, ಸಾಂಪ್ರದಾಯಿಕ ಬಾಸ್ಕೆಟ್‌ನಲ್ಲಿ ಹಾಕಿದ್ದಾರೆ. ಸುಮಾರು ಮೂವತ್ತು ನಿಮಿಷಗಳಿಗೂ ಅಧಿಕ ಕಾಲ ಅವರೊಂದಿಗೆ ಕಳೆದ ಮೋದಿ, ಚಹಾ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು. ಅಲ್ಲಿನ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗವಕಾಶಗಳ ಬಗ್ಗೆ ಮಾತನಾಡಿದ್ದಾರೆ. ಟೀ ಎಸ್ಟೇಟ್‌ಗೆ ಭೇಟಿ ನೀಡಿದ ಪೋಟೊಗಳನ್ನು ಪ‍್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

Source : Prajavani

1 hour ago

Home Flash News