... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
Tumakuru: ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ

Tumakuru: ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ, ಸಿದ್ದಗಂಗಾ ಮಠವನ್ನ ಕೊಂಡಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ತುಮಕೂರು (ಏ.01): ಶಿವಕುಮಾರ ಸ್ವಾಮೀಜಿಗಳ (Shivakumar Swamiji) 119ನೇ ಜನ್ಮದಿನೋತ್ಸವ ಕಾರ್ಯಕ್ರಮ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ರಾಷ್ಟ್ರಪತಿ (President) ದ್ರೌಪದಿ ಮುರ್ಮು ಪೂಜೆ ಸಲ್ಲಿಸಿದ್ರು. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತಾಡಿದ ಅವ್ರು ಮಠದ ತ್ರಿವಿಧ ದಾಸೋಹ, ಶಿಕ್ಷಣ ಮತ್ತು ರಾಷ್ಟ್ರ ವಿಕಾಸಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
ಶ್ರೀಮಠವನ್ನು ಕೊಂಡಾಡಿದ ರಾಷ್ಟ್ರಪತಿ ದಯವೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆದು ಕೊಂಡಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೊಂಡಾಡಿದ್ದಾರೆ. ವಿವಿಧ ಇಲಾಖೆಗಳ ಕೇಂದ್ರ ಸಚಿವರು, ರಾಜ್ಯ ಸರ್ಕಾರದ ಮಂತ್ರಿಗಳು ಸೇರಿ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಡ ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯ ಶಿವಕುಮಾರ ಸ್ವಾಮೀಜಿಗಳು ಬಡ ಮಕ್ಕಳಿಗೆ ಹಾಗೂ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡುವ ಕೆಲಸ ಮಾಡಿದ್ದಾರೆ. ಹಲವು ವರ್ಷಗಳು ಒಂದೇ ಸ್ಥಳದಲ್ಲಿ ಉತ್ತಮವಾದ ಕೆಲಸಗಳ ಮಾಡುವ ಮೂಲಕ ಜೀವನ ಸಮರ್ಪಣೆ ಮಾಡಿದ್ದಾರೆ.

 ಸ್ವಾಮೀಜಿಗಳು ನಡೆದು ಬಂದ ದಾರಿಯೇ ವಿಸ್ಮಯ ಹಾಗೂ ಪವಾಡ ಎನ್ನಬಹುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೊಂಡಾಡಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಉಸ್ತುವಾರಿ‌ ಸಚಿವ ಡಾ.ಜಿ ಪರಮೇಶ್ವರ್, ಕೇಂದ್ರ ಸಚಿವ ವಿ ಸೋಮಣ್ಣ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ರು. ಲಿಂಗೈಕ್ಯ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನಡೆಯುತ್ತಿದ್ದು, ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಗದ್ದುಗೆಗೆ ಪೂಜೆ ಮಾಡುತ್ತಿದ್ದಾರೆ. ಮಂತ್ರಘೋಷಗಳಿಂದ ಪೂಜೆ ನಡೆಯುತ್ತಿದೆ. ಮಠದಲ್ಲಿ ರುದ್ರಾಕ್ಷಿ ಮಂಟಪ ಮೆರವಣಿಗೆ ಮಾಡಲಾಯಿತು. ರುದ್ರಾಕ್ಷಿ ಮಂಟಪದಲ್ಲಿ ಶಿವಕುಮಾರ ಶ್ರೀಗಳ ಪುತ್ಥಳಿ ಇರಿಸಿ ಮೆರವಣಿಗೆ ಕೂಡ ನಡೆದಿದೆ.

Source : News18 Kannada

1 hour ago

Home Flash News