ಐಟಿ ವಲಯಕ್ಕೆ ಬಿಗ್ ಶಾಕ್: 30,000 ನೌಕರರ ಮನೆಗೆ ಕಳುಹಿಸಿದ Oracle..!
ಜಾಗತಿಕ ಐಟಿ ವಲಯದಲ್ಲಿ ಉದ್ಯೋಗ ಕಡಿತದ ಪರ್ವ ಮುಂದುವರಿದಿದೆ. ಅಮೆರಿಕ ಮೂಲದ ಪ್ರಖ್ಯಾತ ಐಟಿ ಕಂಪನಿ ಒರಾಕಲ್ (Oracle) ಭಾರತದಲ್ಲಿ ಬರೋಬ್ಬರಿ 12,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ. ಇದು ಭಾರತೀಯ ಐಟಿ ಉದ್ಯೋಗಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು: ಜಾಗತಿಕ ಐಟಿ ವಲಯದಲ್ಲಿ ಉದ್ಯೋಗ ಕಡಿತದ ಪರ್ವ ಮುಂದುವರಿದಿದೆ. ಅಮೆರಿಕ ಮೂಲದ ಪ್ರಖ್ಯಾತ ಐಟಿ ಕಂಪನಿ ಒರಾಕಲ್ (Oracle) ಭಾರತದಲ್ಲಿ ಬರೋಬ್ಬರಿ 12,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ. ಇದು ಭಾರತೀಯ ಐಟಿ ಉದ್ಯೋಗಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ವರದಿಗಳ ಪ್ರಕಾರ, ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಇದರಲ್ಲಿ ಭಾರತೀಯ ಉದ್ಯೋಗಿಗಳ ಸಂಖ್ಯೆಯೇ ಅತಿ ಹೆಚ್ಚಿದೆ. ಒಟ್ಟಾರೆ ವಜಾಗೊಂಡವರಲ್ಲಿ ಶೇ. 40 ಕ್ಕಿಂತ ಹೆಚ್ಚು ಮಂದಿ ಭಾರತೀಯರೇ ಆಗಿದ್ದಾರೆ. ಭಾರತದಲ್ಲಿ ಒರಾಕಲ್ ಸುಮಾರು 30,000 ಉದ್ಯೋಗಿಗಳನ್ನು ಹೊಂದಿದ್ದು, ಅವರಲ್ಲಿ ಸುಮಾರು ಶೇ. 40 ರಷ್ಟು ಮಂದಿ ಈ ನಿರ್ಧಾರದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ ಒಂದು ತಿಂಗಳಲ್ಲಿ ಮತ್ತೊಂದು ಸುತ್ತಿನ ಬೃಹತ್ ಉದ್ಯೋಗ ಕಡಿತ ನಡೆಯುವ ಸಾಧ್ಯತೆಯಿದೆ.
ಇದನ್ನೂ ಓದಿ: ಡಾ.ಶಿವಕುಮಾರ ಶ್ರೀಗಳು ಅಷ್ಟೊಂದು ಫೇಮಸ್ ಹೇಗೆ? ಸಿದ್ದಗಂಗಾ ಮಠದ ಹಿನ್ನೆಲೆ
ಉದ್ಯೋಗ ಕಡಿತಕ್ಕೆ ಕಾರಣವೇನು?
ಉದ್ಯೋಗಿಗಳಿಗೆ ಕಳುಹಿಸಲಾದ ಇಮೇಲ್‌ನಲ್ಲಿ ಕಂಪನಿಯು ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಸಂಸ್ಥೆಯಲ್ಲಿ ಕೆಲವು ಆಂತರಿಕ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಕಾರ್ಯಾಚರಣೆಯನ್ನು ಸರಳಗೊಳಿಸುವ ಉದ್ದೇಶದಿಂದ ಹಲವು ಹುದ್ದೆಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ. ಅಧಿಕೃತವಾಗಿ ಈ ಬಗ್ಗೆ ಪ್ರತಿಕ್ರಿಯಿಸಲು ಒರಾಕಲ್ ನಿರಾಕರಿಸಿದೆ.