... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಚೆಪಾಕ್-ತಿರುವಲ್ಲಿಕೇಣಿ ಕ್ಷೇತ್ರದಿಂದ ಉದಯನಿಧಿ ಸ್ಪರ್ಧೆ, ನಾಮಪತ್ರ ಸಲ್ಲಿಕೆ

ಚೆಪಾಕ್-ತಿರುವಲ್ಲಿಕೇಣಿ ಕ್ಷೇತ್ರದಿಂದ ಉದಯನಿಧಿ ಸ್ಪರ್ಧೆ, ನಾಮಪತ್ರ ಸಲ್ಲಿಕೆ

ಚೆನ್ನೈ: ತಮಿಳುನಾಡು ಉಪಮುಖ್ಯಮಂತ್ರಿ ಮತ್ತು ಡಿಎಂಕೆ ಯುವ ಮೋರ್ಚಾ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್‌ ಅವರು ಚೆಪಾಕ್-ತಿರುವಲ್ಲಿಕೇಣಿ ಕ್ಷೇತ್ರದಿಂದ ಸತತ ಎರಡನೇ ಬಾರಿ ಸ್ಪರ್ಧಿಸುತ್ತಿದ್ದು, ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪಕ್ಷದ ಕಾರ್ಯಕರ್ತರೊಡನೆ ರೋಡ್ ಶೋದಲ್ಲಿ ಭಾಗವಹಿಸಿದ ಅವರು ನಂತರ ಪಕ್ಷದ ಹಿರಿಯ ನಾಯಕರು ಮತ್ತು ಸ್ಥಳೀಯ ಪದಾಧಿಕಾರಿಗಳೊಂದಿಗೆ ತೆರಳಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಡಿಎಂಕೆಗೆ ಬಹುಮತ ಸಿಗುವ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. ‘ಈ ಬಾರಿ ನಾವು ಖಂಡಿತವಾಗಿಯೂ ಗೆಲ್ಲುತ್ತೇವೆ. 

ಕಳೆದ ಐದು ವರ್ಷಗಳಲ್ಲಿ ಸ್ಟಾಲಿನ್ ಅವರು ಮಾಡಿದ ಉತ್ತಮ ಕೆಲಸಗಳಿಂದ ರಾಜ್ಯದ ಜನತೆ ವಿಶೇಷವಾಗಿ ಮಹಿಳೆಯರು ಸಂತೋಷಗೊಂಡಿದ್ದಾರೆ. ಚೆಪಾಕ್-ತಿರುವಲ್ಲಿಕೇಣಿ ನನ್ನ ಮನೆ. ಇಂದು ವ್ಯಕ್ತವಾಗಿರುವ ಅಗಾಧ ಬೆಂಬಲವು ಪಕ್ಷದ ಜಯವನ್ನು ಧೃಡಪಡಿಸಿದೆ. ಇಂದು ಸಂಜೆಯಿಂದ ಪ್ರಚಾರ ಆರಂಭವಾಗಲಿದೆ’ ಎಂದು ಹೇಳಿದ್ದಾರೆ. ಇದೇ ವೇಳೆ, ಕೇಂದ್ರದ ನೀತಿಗಳ ‘ಹೇರಿಕೆ’ಯ ವಿರುದ್ಧ ಪಕ್ಷದ ನಿಲುವನ್ನು ಪುನರುಚ್ಚರಿಸಿದ ಅವರು, 2026ರ ಚುನಾವಣೆಯನ್ನು ‘ತಮಿಳುನಾಡಿನ ಸ್ವಾಭಿಮಾನ ಮತ್ತು ಹಕ್ಕುಗಳನ್ನು ರಕ್ಷಿಸುವ’ ಹೋರಾಟ ಎಂದು ಬಣ್ಣಿಸಿದ್ದಾರೆ. ದಿವಂಗತ ಎಂ. ಕರುಣಾನಿಧಿ ಅವರು ಪ್ರತಿನಿಧಿಸುತ್ತಿದ್ದ, ಡಿಎಂಕೆಯ ಸಾಂಪ್ರದಾಯಿಕ ಭದ್ರಕೋಟೆಯಾದ ಚೆಪಾಕ್-ತಿರುವಲ್ಲಿಕೇಣಿ ಕ್ಷೇತ್ರವು ಈ ಬಾರಿ ಹೈ-ಪ್ರೊಫೈಲ್ ಸ್ಪರ್ಧೆಗೆ ಸಾಕ್ಷಿಯಾಗಲಿದೆ. 234 ಸ್ಥಾನಗಳ ತಮಿಳುನಾಡು ವಿಧಾನಸಭೆಗೆ ಏ. 23 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

Source : Prajavani

1 hour ago

Home Flash News