... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಪ್ರಧಾನಿಯನ್ನು ಭೇಟಿ ಮಾಡಲು ಬಂದಿದ್ದಷ್ಟೇ, ಚುನಾವಣೆಗೆ ಸ್ಪರ್ಧಿಸಲ್ಲ:

ಪ್ರಧಾನಿಯನ್ನು ಭೇಟಿ ಮಾಡಲು ಬಂದಿದ್ದಷ್ಟೇ, ಚುನಾವಣೆಗೆ ಸ್ಪರ್ಧಿಸಲ್ಲ: ಅಣ್ಣಾಮಲೈ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ನಾಯಕ ಅಣ್ಣಾಮಲೈ ಅವರು ಶನಿವಾರ(ಏ.4) ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಚೆನ್ನೈಗೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅಣ್ಣಾಮಲೈ ಅವರು ಕೇರಳದಿಂದ ಹಿಂದಿರುಗಿ ಬಂದಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ ಒಪ್ಪಿಗೆಗಾಗಿ ಕಳಿಸಲಾಗಿದೆ. ಅದರಲ್ಲಿ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಅವರ ಹೆಸರಿಲ್ಲ. ಆದರೆ, ಅವರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಶುಕ್ರವಾರ(ಏ.3) 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿತ್ತು. ಅದರಲ್ಲಿ ಅಣ್ಣಾಮಲೈ ಹೆಸರು ಇರಲಿಲ್ಲ.
ಈ ಕುರಿತು ಪ್ರತಿಕ್ರಿಯೆ ನೀಡಿದ ಅಣ್ಣಾಮಲೈ, ‘ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದೆ. ತಮಿಳುನಾಡಿನಾದ್ಯಂತ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಷ್ಟೇ ನನ್ನ ಕೆಲಸ. ಏ.7ರವರೆಗೆ ಪುದುಚೇರಿ ಮತ್ತು ಕೇರಳದಲ್ಲಿ ಪ್ರಚಾರ ಮಾಡುವಂತೆ ಪಕ್ಷವು ಜವಾಬ್ದಾರಿ ನೀಡಿದೆ. ಆ ನಂತರ ರಾಜ್ಯದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಮೋದಿಯೊಂದಿಗಿನ ಮಾತುಕತೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಣ್ಣಾಮಲೈ, ‘ಪ್ರಧಾನಿಯೊಂದಿಗೆ ಚರ್ಚೆಗೆ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ. ಈ ಮಾತುಕತೆಯು ಚುನಾವಣೆಯ ಕುರಿತಾಗಿದೆ’ ಎಂದು ಹೇಳಿದ್ದಾರೆ. ಏಪ್ರಿಲ್ 23ರಂದು ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬೀಳಲಿದೆ.

Source : Prajavani

1 hour ago

Home Flash News