... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಜಾತ್ರೆಯಲ್ಲಿ ಕುಸಿದು ಬಿದ್ದ 60 ಅಡಿ ಎತ್ತರದ ಜಾಯಿಂಟ್ ವೀಲ್;

ಜಾತ್ರೆಯಲ್ಲಿ ಕುಸಿದು ಬಿದ್ದ 60 ಅಡಿ ಎತ್ತರದ ಜಾಯಿಂಟ್ ವೀಲ್; 30ಕ್ಕೂ ಹೆಚ್ಚು ಮಂದಿಗೆ ಗಾಯ!

ಕುಶಿನಗರ (ಉತ್ತರ ಪ್ರದೇಶ): ವಾರ್ಷಿಕ ಜಾತ್ರೆಯ ಸಂಭ್ರಮದಲ್ಲಿದ್ದ ಜನರಿಗೆ ಬುಧವಾರ ರಾತ್ರಿ ಅನಿರೀಕ್ಷಿತ ಆಘಾತ ಕಾದಿತ್ತು. ಖಡ್ಡಾ ಪ್ರದೇಶದ ಭೈಂಸಹಾ (ಚೈತ್ ಬರ್ನಿ) ಮೇಳದಲ್ಲಿ ಕಾರ್ಯಾಚರಣೆಯಲ್ಲಿದ್ದ 60 ಅಡಿ ಎತ್ತರದ ದೈತ್ಯ ಜಾಯಿಂಟ್ ವೀಲ್ (ಸ್ವಿಂಗ್ ರೈಡ್) ದಿಢೀರನೆ ಕುಸಿದು ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ರೈಡ್ ಕುಸಿದು ಬಿದ್ದಾಗ ಅದರಲ್ಲಿ ಸುಮಾರು 80 ಮಂದಿ ಇದ್ದರು. ಇದು ರೈಡ್‌ನ ಸಾಮರ್ಥ್ಯಕ್ಕಿಂತ ಮೀರಿದ ಸಂಖ್ಯೆಯಾಗಿದೆ. 

ರೈಡ್ ಎರಡು ಸುತ್ತು ತಿರುಗಿದ ನಂತರ ವಿಚಿತ್ರವಾದ ಸದ್ದು ಕೇಳಿಬಂದಿದೆ, ಇದು ಅದರಲ್ಲಿನ ಸಮಸ್ಯೆಯ ಮುನ್ಸೂಚನೆ ಆಗಿತತು. ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದರೂ, ಆಪರೇಟರ್ ರೈಡ್ ಅನ್ನು ನಿಲ್ಲಿಸದೆ ಮುಂದುವರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲವೇ ಕ್ಷಣಗಳಲ್ಲಿ ರೈಡ್‌ನ ಬುನಾದಿ ಕಿತ್ತುಬಂದು ಇಡೀ ದೈತ್ಯ ರಚನೆಯು ನೆಲಕ್ಕೆ ಅಪ್ಪಳಿಸಿತು. ಇದರಿಂದಾಗಿ ರೈಡ್‌ನಲ್ಲಿದ್ದ ಹಲವರು ನೆಲಕ್ಕೆ ಬಿದ್ದು ಗಾಯಗೊಂಡರೆ, ಇನ್ನು ಕೆಲವರು ಕಬ್ಬಿಣದ ರಾಡ್‌ಗಳ ಅಡಿಯಲ್ಲಿ ಸಿಲುಕಿಕೊಂಡರು. ಈ ಘಟನೆಯಿಂದ ಜಾತ್ರಾ ಸ್ಥಳದಲ್ಲಿ ಜನಜಂಗುಳಿ ಮತ್ತು ಭೀತಿಯ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯಾಚರಣೆಗೆ ಮುಂದಾದರು. ಬೃಹತ್ ಲೋಹದ ರಚನೆಯ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಶ್ರಮಿಸಬೇಕಾಯಿತು. ಆರು ಆಂಬ್ಯುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ಗಂಭೀರವಾಗಿ ಗಾಯಗೊಂಡ 10ಕ್ಕೂ ಹೆಚ್ಚು ಮಂದಿಯನ್ನು ಜಿಲ್ಲಾ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದ್ದು, ಇಬ್ಬರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.

Source : Asianet News

1 hour ago

Home Flash News