ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿತಾರೆ: ಸಿದ್ದು ಪರ ಪರಮೇಶ್ವರ್ ಬ್ಯಾಟಿಂಗ್
ಮೈಸೂರು: ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅವರೇ 5 ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳುವ ಮೂಲಕ ಗೃಹ ಸಚಿವ ಜಿ. ಪರಮೇಶ್ವರ್ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಜಿ ಪರಮೇಶ್ವರ್ ಅವರು, ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ. 2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ರು ತಾನೇ ಹಾಗೆಯೇ ಈ ಬಾರಿಯೂ 2023ರಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028 ಅದನ್ನ ಅವರು ಮುಗಿಸಬೇಕು ತಾನೇ ಎಂದು ಮಾಧ್ಯಮದವರನ್ನೇ ಮರು ಪ್ರಶ್ನಿಸಿದ್ದಾರೆ.
ಸಿದ್ದು ಪರ ಪರಮೇಶ್ವರ್ ಬ್ಯಾಟಿಂಗ್
ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ. ಹೈಕಮಾಂಡ್ ಯಾವ ಗೊಂದಲಗಳನ್ನ ಸೃಷ್ಟಿ ಮಾಡಿಲ್ಲ.ಬಯಾರು ಏನೇ ಹೇಳಿದರು ಅದು ಮುಖ್ಯ ಅಲ್ಲ. ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಎಂದು ಹೇಳಿದ್ಯಾ? ಯಾವತ್ತಾದರೂ ಬದಲಾವಣೆ ಬಗ್ಗೆ ಮಾತನಾಡಿದ್ದರಾ? ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ ಎಂಬುದಾಗಿದೆ ಎಂದು ಪರಮೇಶ್ವರ್ ಹೇಳಿಕೆ ನೀಡುತ್ತಾ ಸಿದ್ದರಾಮಯ್ಯ ಗದ್ದುಗೆಯನ್ನು ಭದ್ರಪಡಿಸುವ ಹೇಳಿಕೆ ನೀಡಿದ್ದಾರೆ.
ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್.
ಹೈಕಮಾಂಡ್ ಯಾವತಾದ್ರು ಇದರ ಬಗ್ಗೆ ಮಾತನಾಡಿದರೆ ಆಗ ಅದಕ್ಕೆ ಒಂದು ಅರ್ಥ ಬರುತ್ತದೆ. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ ಎಂದು ಪರಮೇಶ್ವರ್ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಡಿಸಿಎಂ ಆಗಿದ್ದಾರೆ, ಅವರು ನಮ್ಮ ನಾಯಕರು. ಅವರಿಗೆ ಯಾವ ಸಮಸ್ಯೆಯೂ ಆಗಿಲ್ಲ. ಸಿಎಂ ವಿಧಾನಸಭೆಯಲ್ಲೇ ಹೇಳಿದ್ದಾರೆ. ನಮ್ಮ ಎಲ್ಲಾ ಶಾಸಕರು ಸಿಎಂ ಸ್ಥಾನಕ್ಕೆ ಅರ್ಹರು ಎಂದು ಹೇಳಿದ್ದಾರೆ. ಅದರಲ್ಲಿ ನಾನು ಅರ್ಹ ಇನ್ನೊಬ್ಬರು ಅರ್ಹರಲ್ಲ ಎಂಬ ಪ್ರಶ್ನೆಯೇ ಬರುವುದಿಲ್ಲ ಎಂದು ಪರಮೇಶ್ವರ ಹೇಳಿಕೆ ನೀಡಿದ್ದಾರೆ.