... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
Thanjavur: ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶವಿಲ್ಲ:

Thanjavur: ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶವಿಲ್ಲ: ಉದಯನಿಧಿ ಸ್ಟಾಲಿನ್

ತಂಜಾವೂರು: "ತಮಿಳುನಾಡು ಎಂದಿಗೂ ಹಿಂದಿ ಹೇರಿಕೆಯನ್ನು ಸಹಿಸುವುದಿಲ್ಲ. ಕೇಂದ್ರ ಸರ್ಕಾರದ ತ್ರಿಭಾಷಾ ಸೂತ್ರವನ್ನು ತಿರಸ್ಕರಿಸಿರುವ ನಾವು, ರಾಜ್ಯದಲ್ಲಿ ತಮಿಳು ಮತ್ತು ಇಂಗ್ಲಿಷ್ ಒಳಗೊಂಡ ದ್ವಿಭಾಷಾ ನೀತಿಯನ್ನೇ ಮುಂದುವರಿಸಲಿದ್ದೇವೆ," ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಕೇಂದ್ರ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಜಿಲ್ಲೆಯ ತಿರುವೈಯಾರು ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆ ಅಭ್ಯರ್ಥಿ ದುರೈ ಚಂದ್ರಶೇಖರನ್ ಪರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

 ಹಿಂದಿ ಹೇರಿಕೆಯ ಅಸ್ತ್ರ 'ಎನ್ಇಪಿ' ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಮೂಲಕ ಕೇಂದ್ರ ಸರ್ಕಾರವು ತಮಿಳುನಾಡಿನ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರಲು ಯತ್ನಿಸುತ್ತಿದೆ ಎಂದು ಉದಯನಿಧಿ ಆರೋಪಿಸಿದರು. "ಎನ್ಇಪಿಯನ್ನು ಒಪ್ಪಿಕೊಳ್ಳುವುದು ಎಂದರೆ ಹಿಂದಿ ಗುಲಾಮಗಿರಿಯನ್ನು ಒಪ್ಪಿಕೊಂಡಂತೆ. ನಮ್ಮ ಭಾಷಾ ಅಸ್ಮಿತೆಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಅಣ್ಣಾ ಕಾಲದಿಂದಲೂ ನಾವು ಅನುಸರಿಸಿಕೊಂಡು ಬಂದಿರುವ ದ್ವಿಭಾಷಾ ನೀತಿಗೆ ನಾವು ಬದ್ಧ," ಎಂದು ಅವರು ಪುನರುಚ್ಚರಿಸಿದರು. ಗೆಲ್ಲಿಸಿದರೆ ಮಂತ್ರಿ ಸ್ಥಾನದ ಭರವಸೆ ಕ್ಷೇತ್ರದ ಡಿಎಂಕೆ ಅಭ್ಯರ್ಥಿ ದುರೈ ಚಂದ್ರಶೇಖರನ್ ಅವರನ್ನು ಕನಿಷ್ಠ 50,000 ಮತಗಳ ಅಂತರದಿಂದ ಗೆಲ್ಲಿಸಿಕೊಟ್ಟರೆ, ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಬಳಿ ಶಿಫಾರಸು ಮಾಡುವುದಾಗಿ ಉದಯನಿಧಿ ಮತದಾರರಿಗೆ ಭರವಸೆ ನೀಡಿದರು.

Source : Udayavani

2 days ago

Home Flash News