... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ವಿಕಸಿತ ಭಾರತ ನಿರ್ಮಾಣವಾಗಲು ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಅತ್ಯಗತ್ಯ:

ವಿಕಸಿತ ಭಾರತ ನಿರ್ಮಾಣವಾಗಲು ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಅತ್ಯಗತ್ಯ: ಮೋದಿ

ನವದೆಹಲಿ: ಎಲ್ಲಾ ವಲಯಗಳಲ್ಲಿನ ಮಹಿಳಾ ಸಬಲೀಕರಣಕ್ಕೆ ನಮ್ಮ ಸರ್ಕಾರವು ಆದ್ಯತೆ ನೀಡಿದೆ. ಮಹಿಳಾ ಮೀಸಲಾತಿ ಕಾಯ್ದೆಯು, ಭಾರತದಲ್ಲಿ ಮಹಿಳೆಯರ ನೇತೃತ್ವದ ಸರ್ಕಾರ ರಚಿಸಲು ನೆರವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(ಏ.7) ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪ್ರಧಾನಿ ಮೋದಿ ಅವರು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಅವರ ಪ್ರಕಟಿತ ಅಂಕಣವನ್ನು ಉಲ್ಲೇಖಿಸಿದ್ದಾರೆ. ‘ನಮ್ಮ ಸರ್ಕಾರವು ಎಲ್ಲಾ ವಲಯಗಳಲ್ಲಿನ ನಾರಿ ಶಕ್ತಿಯ ಅಭಿವೃದ್ಧಿಗೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಯಾವುದೇ ವಲಯದಲ್ಲಿನ ಭಾಗವಹಿಸುವಿಕೆಯು ಬೇರೆಯವರ ಮೇಲೆ ಬಾರಿ ಪ್ರಭಾವವನ್ನು ಬೀರುತ್ತದೆ.

 ಹಾಗಾಗಿ, ನಾರಿ ಶಕ್ತಿ ವಂದನಾ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಇದರಿಂದ ಭಾರತವು ಮಹಿಳಾ ನೇತೃತ್ವದ ಸರ್ಕಾರ ರಚಿಸಲು ಸಾಧ್ಯವಾಗುತ್ತದೆ. ಇದು ವಿಕಸಿತ ಭಾರತದ ಅಡಿಪಾಯವಾಗಿದೆ’ ಎಂದು ಹೇಳಿದ್ದಾರೆ. ಈ ಕಾಯ್ದೆಯು ಮಹಿಳಾ ಸಬಲೀಕರಣಕ್ಕೆ ನೆರವಾಗುತ್ತದೆ. ಹಾಗಾಗಿ, ರಾಜಕೀಯ ಲೆಕ್ಕಾಚಾರಗಳನ್ನು ಹೊರತುಪಡಿಸಿ ಇದಕ್ಕೆ ಎಲ್ಲಾ ಪಕ್ಷಗಳು ಕೂಡ ಬೆಂಬಲ ನೀಡಿ ಎಂದು ಮನವಿ ಮಾಡಿದ್ದಾರೆ. ರಾಜಕೀಯದಲ್ಲಿ ಮಹಿಳಾ ಮೀಸಲಾತಿ ನೀಡುವ ‘ನಾರಿ ಶಕ್ತಿ ವಂದನಾ ಅಭಿಯಾನ’ ಹೆಸರಿನ ಕಾಯ್ದೆಯನ್ನು 2023ರಲ್ಲಿ ಸಂಸತ್ತಿನಲ್ಲಿ ಕೇಂದ್ರ ಸರ್ಕಾರವು ಮಂಡಿಸಿತ್ತು. ಇದರ ಅನ್ವಯ ಲೋಕಸಭೆ ಮತ್ತೆ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಸಿಗಲಿದೆ. ಕಾನೂನಿನಲ್ಲಿ ತಿದ್ದುಪಡಿ ಮಾಡುವ ಮೂಲಕ ಈ ಕಾಯ್ದೆಯನ್ನು ಜಾರಿಗೊಳಿಸಲು ಕೇಂದ್ರವು ಮುಂದಾಗಿದೆ. 2029ರಿಂದ ಮಹಿಳಾ ಮೀಸಲಾತಿ ಕಾಯ್ದೆಯು ಜಾರಿಗೊಳ್ಳುವ ನಿರೀಕ್ಷೆಯಿದೆ.

Source : Prajavani

1 hour ago

Home Flash News