... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
Kasaragod; ಮಂಜೇಶ್ವರದಲ್ಲಿ ಈ ಬಾರಿ ಕಮಲ ಅರಳುವುದರಲ್ಲಿ ಯಾವುದೇ ಸಂಶಯವಿಲ್ಲ:

Kasaragod; ಮಂಜೇಶ್ವರದಲ್ಲಿ ಈ ಬಾರಿ ಕಮಲ ಅರಳುವುದರಲ್ಲಿ ಯಾವುದೇ ಸಂಶಯವಿಲ್ಲ: ಅಣ್ಣಾಮಲೈ

ಕಾಸರಗೋಡು: ಕೇರಳ ವಿಧಾನಸಭೆ ಚುನಾವಣೆಯ ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಪರವಾಗಿ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರು ಮಂಗಳವಾರ ಅಬ್ಬರದ ಚುನಾವಣಾ ಪ್ರಚಾರ ನಡೆಸಿದರು. ಕಾಸರಗೋಡು ಜಿಲ್ಲೆಯ ವಿವಿಧೆಡೆ ನಡೆದ ರೋಡ್ ಶೋ ಮತ್ತು ಬಹಿರಂಗ ಸಭೆಗಳಲ್ಲಿ ಭಾಗವಹಿಸಿದ ಅಣ್ಣಾಮಲೈ, ಮಂಜೇಶ್ವರದಲ್ಲಿ ಈ ಬಾರಿ ಕಮಲ ಅರಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ತಮಿಳುನಾಡು ಮತ್ತು ಕರ್ನಾಟಕದ ಗಡಿ ಹಂಚಿಕೊಳ್ಳುವ ಮಂಜೇಶ್ವರದಲ್ಲಿ ಅಣ್ಣಾಮಲೈ ಅವರ ಭೇಟಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಸುರೇಂದ್ರನ್ ಗೆಲುವು ನಿಶ್ಚಿತ: ಕಳೆದ ಬಾರಿ ಕೂದಲೆಳೆ ಅಂತರದಲ್ಲಿ ಜಯ ತಪ್ಪಿದ್ದ ಕೆ. ಸುರೇಂದ್ರನ್ ಅವರು ಈ ಬಾರಿ ಮಂಜೇಶ್ವರದ ಜನರ ಆಶೀರ್ವಾದದೊಂದಿಗೆ ವಿಧಾನಸಭೆ ಪ್ರವೇಶಿಸಲಿದ್ದಾರೆ ಎಂದು ಅಣ್ಣಾಮಲೈ ಭವಿಷ್ಯ ನುಡಿದರು. 

  ಎಲ್‌ಡಿಎಫ್-ಯುಡಿಎಫ್ ವಿರುದ್ಧ ವಾಗ್ದಾಳಿ: ಕೇರಳವನ್ನು ಆಳುತ್ತಿರುವ ಎಡರಂಗ (LDF) ಮತ್ತು ಪ್ರತಿಪಕ್ಷ ಯುಡಿಎಫ್ (UDF) ಎರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಭ್ರಷ್ಟ ಸರ್ಕಾರಗಳಿಂದ ಕೇರಳದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಅವರು ಟೀಕಿಸಿದರು. ಮಂಜೇಶ್ವರದ ಮೇಲೆ ಕಣ್ಣು ಮಂಜೇಶ್ವರ ಕ್ಷೇತ್ರವು ಬಿಜೆಪಿಗೆ ಅತ್ಯಂತ ಪ್ರತಿಷ್ಠೆಯ ಕಣವಾಗಿದೆ. ಕೆ. ಸುರೇಂದ್ರನ್ ಅವರು ಈ ಹಿಂದೆ ಕೇವಲ 89 ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಈ ಅಂತರವನ್ನು ಸರಿಪಡಿಸಿ ದೊಡ್ಡ ಮಟ್ಟದ ಜಯ ಸಾಧಿಸಲು ಬಿಜೆಪಿ ಕೇಂದ್ರ ನಾಯಕರನ್ನು ಪ್ರಚಾರಕ್ಕೆ ಇಳಿಸಿದೆ. ಅಣ್ಣಾಮಲೈ ಅವರು ಪ್ರಚಾರದ ವೇಳೆ ಸ್ಥಳೀಯ ಭಾಷೆಗಳಲ್ಲಿ ಮಾತನಾಡಿ ಮತದಾರರ ಗಮನ ಸೆಳೆದರು. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಮತ್ತು ರಾಷ್ಟ್ರೀಯ ವಿಚಾರಗಳು ಮಂಜೇಶ್ವರದ ಜನರ ಮೇಲೆ ಬೀರಲಿರುವ ಪ್ರಭಾವ ಈ ಬಾರಿ ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸಲಿದೆ ಎಂದು ಅಣ್ಣಾಮಲೈ ಇದೇ ಸಂದರ್ಭದಲ್ಲಿ ಹೇಳಿದರು.

Source : Udayavani

17 hours ago

Home Flash News