ದಾವಣಗೆರೆ, ಬಾಗಲಕೋಟೆ ಉಪಚುನಾವಣೆ: ಬಹಿರಂಗ ಪ್ರಚಾರ ಅಂತ್ಯ, ಏ.9ಕ್ಕೆ ಮತದಾನ
ದಾವಣಗೆರೆ/ಬಾಗಲಕೋಟೆ: ಉಪ ಚುನಾವಣೆಯ ನಡೆಯುತ್ತಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ಮಂಗಳವಾರ ಸಂಜೆ ತೆರೆಬಿದ್ದಿತು. ಉಭಯ ಕ್ಷೇತ್ರಗಳಲ್ಲಿ ಗುರುವಾರ (ಏ. 9) ಮತದಾನ ನಡೆಯಲಿದೆ. ಅದಕ್ಕೆ ಮುನ್ನಾದಿನವಾದ ಬುಧವಾರ ಅಭ್ಯರ್ಥಿಗಳು, ಬೆಂಬಲಿಗರು ಮತದಾರರ ಮನವೊಲಿಸಲು ಮನೆ ಮನೆಗೆ ತೆರಳಿ ಪ್ರಚಾರ ನಡೆಸುವ ಕಸರತ್ತು ನಡೆಸಲಿದ್ದಾರೆ. ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧಪಕ್ಷ ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಕಾಂಗ್ರೆಸ್‌ಗೆ ಎರಡು ಕ್ಷೇತ್ರ ಉಳಿಸಿಕೊಳ್ಳುವ ಸವಾಲು ಇದೆ. ಉಭಯ ಪಕ್ಷಗಳು ಮುಖಂಡರು 10 ದಿನಗಳಿಂದ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದು, ಭಾರಿ ಪ್ರಚಾರ ನಡೆಸಿದ್ದರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಕಣದಲ್ಲಿ 25 ಅಭ್ಯರ್ಥಿಗಳು ಇದ್ದಾರೆ. ಕಾಂಗ್ರೆಸ್ –ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಭರಾಟೆ ಜೋರಾಗಿತ್ತು.