KSRTC-BMTC: ಸರ್ಕಾರದ ವಿರುದ್ಧ ಸಾರಿಗೆ ನೌಕರರ ಸಮರ; ಇವತ್ತು ಬಸ್ಗಳ ಓಡಾಟದಲ್ಲಿ ಭಾರೀ ವ್ಯತ್ಯಯ
ಬೆಂಗಳೂರು (ಏ.08): ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ಹಾದಿ ಹಿಡಿದಿರೋ ಸಾರಿಗೆ ನೌಕರರು (Transport Employees) ಇದೀಗ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ. ಹಿಂಬಾಕಿ ಹಾಗೂ 2024ರ ಜನವರಿಯಿಂದ ವೇತನ ಪರಿಷ್ಕರಣೆಗೆ (Salary Revision) ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮತ್ತೆ ಹೋರಾಟಕ್ಕೆ (Protest) ಸಜ್ಜಾಗಿದ್ದು, ಇಂದು ರಾಜ್ಯದ ಬಸ್ ಸಂಚಾರದಲ್ಲಿ ಬಹುತೇಕ ಏರುಪೇರು ಆಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಹಾಗೂ ನಾಲ್ಕು ಸಂಘಟನೆಗಳ ಒಕ್ಕೂಟ ಪ್ರತಿಭಟನೆಗೆ ಕರೆ ನೀಡಿದೆ.
ಹೀಗಾಗಿ ಸಾರಿಗೆ ನೌಕರರು ಭರವಸೆ ಈಡೇರಿಸುವಂತೆ ಪಟ್ಟು ಹಿಡಿದಿದ್ದು, ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ ನಡೆಸಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಪ್ರತಿಭಟನೆಗೆ ಮುಂದಾದ ನೌಕರರು, ಇಂದು (ಏಪ್ರಿಲ್ 8) ಪಾದಯಾತ್ರೆ ಆರಂಭಿಸಲಿದ್ದಾರೆ. ಚಿತ್ರದುರ್ಗದಿಂದ ಪಾದಯಾತ್ರೆ ಆರಂಭವಾಗಲಿದ್ದು, ಏಪ್ರಿಲ್ 21ರಂದು ಬೆಂಗಳೂರು ತಲುಪಲಿದ್ದಾರೆ. ಅಷ್ಟೇ ಅಲ್ಲದೇ ಏಪ್ರಿಲ್ 21 ರಂದು ಫ್ರೀಡಂ ಪಾರ್ಕ್ನಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ಸಾರಿಗೆ ಮುಖಂಡರು ನಿರ್ಧರಿಸಿದ್ದಾರೆ.