... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
2nd PUC Result : ಎ.9ರಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಲಭ್ಯ

2nd PUC Result : ಎ.9ರಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಲಭ್ಯ

ಉಡುಪಿ/ಬೆಂಗಳೂರು: ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಎ.9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ಪ್ರಕಟಣೆ ಬುಧವಾರ (ಎ.08) ತಿಳಿಸಿದೆ. ಫಲಿತಾಂಶವನ್ನು https://karresults.nic.in ಲಿಂಕ್‌ ಮೂಲಕ ಅಥವಾ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು ಎಂದು ತಿಳಿಸಲಾಗಿದೆ.

 ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ಎ.9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಲಭ್ಯಗೊಳಿಸಲಾಗುವುದು. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಂಕಪಟ್ಟಿಯನ್ನು ಡಿಜಿಲಾಕರ್ ನಿಂದ ಡೌನ್ಲೋಡ್ ಮಾಡಿಕೊಳ್ಳವ ಮಾಹಿತಿಗೆ ವಿಡಿಯೋ ಲಿಂಕ್‌- https://tinyurl.com/mw84wmh9 ನಲ್ಲಿ ತಿಳಿದುಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ಎ.9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಲಭ್ಯವಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

Source : Udayavani

1 hour ago

Home Flash News