... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಲೆಬನಾನ್‌ನಲ್ಲಿ ರಕ್ತಪಾತ.. ಹಾರ್ಮುಜ್ ಜಲಸಂಧಿ ಮತ್ತೆ ಬಂದ್.. ಅಮೆರಿಕ ಆಕ್ರೋಶ..!

ಲೆಬನಾನ್‌ನಲ್ಲಿ ರಕ್ತಪಾತ.. ಹಾರ್ಮುಜ್ ಜಲಸಂಧಿ ಮತ್ತೆ ಬಂದ್.. ಅಮೆರಿಕ ಆಕ್ರೋಶ..!

ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಗೆ ಪ್ರತಿಯಾಗಿ ಇರಾನ್ ಮಿಲಿಟರಿಯು ಜಾಗತಿಕ ತೈಲ ಸಾರಿಗೆಯ ಪ್ರಮುಖ ಮಾರ್ಗವಾದ 'ಹಾರ್ಮುಜ್ ಜಲಸಂಧಿ'ಯನ್ನು ಮತ್ತೆ ಮುಚ್ಚಿದೆ. ವಿಶ್ವವೇ ನಿಟ್ಟುಸಿರು ಬಿಡುವಂತೆ ಮಾಡಿದ್ದ ಇರಾನ್ ಮತ್ತು ಅಮೆರಿಕ ನಡುವಿನ ಕದನ ವಿರಾಮ ಘೋಷಣೆಯಾದ 24 ಗಂಟೆಗಳ ಒಳಗೇ ಮುರಿದುಬೀಳುವ ಹಂತಕ್ಕೆ ತಲುಪಿದೆ. ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಗೆ ಪ್ರತಿಯಾಗಿ ಇರಾನ್ ಮಿಲಿಟರಿಯು ಜಾಗತಿಕ ತೈಲ ಸಾರಿಗೆಯ ಪ್ರಮುಖ ಮಾರ್ಗವಾದ 'ಹಾರ್ಮುಜ್ ಜಲಸಂಧಿ'ಯನ್ನು (Strait of Hormuz) ಮತ್ತೆ ಮುಚ್ಚಿದೆ.
ಒಂದೇ ದಿನ 188 ಮಂದಿ ಪ್ರಾಣ ಕಳ್ಕೊಂಡ್ರು ಬುಧವಾರ ಇಸ್ರೇಲ್ ನಡೆಸಿದ ಭೀಕರ ದಾಳಿಯಲ್ಲಿ ಲೆಬನಾನ್‌ನಲ್ಲಿ ಕನಿಷ್ಠ 188 ಮಂದಿ ಸಾವನ್ನಪ್ಪಿದ್ದಾರೆ ಮತ್ತು 800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದು ಈ ಸಂಘರ್ಷದ ಅತ್ಯಂತ ಭೀಕರ ದಿನಗಳಲ್ಲಿ ಒಂದಾಗಿದೆ. ಈ ದಾಳಿಯನ್ನು ಪ್ರತಿಭಟಿಸಿ ಇರಾನ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಮುದ್ರ ಮಾರ್ಗವನ್ನು ಬಂದ್ ಮಾಡಿದೆ. ಇದನ್ನೂ ಓದಿ: ಮತ್ತೆ ಯುದ್ಧದ ಭೀತಿ: ಅತಂತ್ರ ಸ್ಥಿತಿಯಲ್ಲಿ ಇರಾನ್-ಅಮೆರಿಕ ಕದನ ವಿರಾಮ; ಲೆಬನಾನ್ ಮೇಲೆ ಇಸ್ರೇಲ್ ಭೀಕರ ದಾಳಿ! ಅಮೆರಿಕ ಗರಂ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಇರಾನ್ ಕ್ರಮಕ್ಕೆ ಶ್ವೇತಭವನ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. 

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್ ಮಾತನಾಡಿ, ಇದು ಸಂಪೂರ್ಣವಾಗಿ ಅಂಗೀಕಾರಾರ್ಹವಲ್ಲದ ಕ್ರಮ. ಇರಾನ್ ಖಾಸಗಿಯಾಗಿ ಒಂದು ಮಾತು ಹೇಳಿ, ಸಾರ್ವಜನಿಕವಾಗಿ ಮತ್ತೊಂದು ರೀತಿ ವರ್ತಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುವ ಹಡಗುಗಳಿಗೆ ಇರಾನ್ 'ಟೋಲ್' (ಶುಲ್ಕ) ವಿಧಿಸಲು ಮುಂದಾಗಿದೆ. ಇದಕ್ಕೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ ನೀಡಿಲ್ಲ ಮತ್ತು ಯಾವುದೇ ನಿರ್ಬಂಧವಿಲ್ಲದ ಮುಕ್ತ ಸಂಚಾರ ಇರಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸಮುದ್ರದಲ್ಲಿ ಹಡಗುಗಳ ಯೂ-ಟರ್ನ್! ಜಲಸಂಧಿಯನ್ನು ಮುಚ್ಚಿದ ಹಿನ್ನೆಲೆಯಲ್ಲಿ ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಹಡಗುಗಳು ದಾರಿ ಬದಲಿಸಿ ವಾಪಸ್ ಹೋಗುತ್ತಿವೆ. 

ತೈಲ ಟ್ಯಾಂಕರ್ 'AUROURA' ಮುಸಂದಮ್ ಕರಾವಳಿಯ ಬಳಿ ಇದ್ದಕ್ಕಿದ್ದಂತೆ ಯೂ-ಟರ್ನ್ ಪಡೆದು ಪರ್ಷಿಯನ್ ಗಲ್ಫ್ ಕಡೆಗೆ ಮುಖ ಮಾಡಿದೆ. ಕೇವಲ 7 ಹಡಗುಗಳು ಮಾತ್ರ ಬುಧವಾರ ಈ ಜಲಸಂಧಿಯನ್ನು ದಾಟಲು ಯಶಸ್ವಿಯಾಗಿವೆ ಎಂದು ವರದಿಗಳು ತಿಳಿಸಿವೆ. ಕದನ ವಿರಾಮದ ಒಪ್ಪಂದದ ವ್ಯಾಪ್ತಿಗೆ ಲೆಬನಾನ್ ಬರುತ್ತದೆಯೇ ಎಂಬುದು ಈಗ ದೊಡ್ಡ ವಿವಾದವಾಗಿದೆ. ಲೆಬನಾನ್ ಮೇಲೆ ದಾಳಿ ಮುಂದುವರಿಸಿದರೆ ಅದು ಕದನ ವಿರಾಮದ ಉಲ್ಲಂಘನೆ ಎಂದು ಇರಾನ್ ಭಾವಿಸಿದೆ. ಆದರೆ, ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಲೆಬನಾನ್ ಈ ಕದನ ವಿರಾಮದ ಒಪ್ಪಂದದ ಭಾಗವಲ್ಲ ಎಂದು ವಾದಿಸುತ್ತಿದ್ದಾರೆ. ಒಟ್ಟಾರೆಯಾಗಿ, ಶಾಂತಿ ಮರಳಬಹುದು ಎಂಬ ನಿರೀಕ್ಷೆಯಲ್ಲಿದ್ದ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡಗಳು ಕವಿದಿವೆ.

Source : News18 Kannada

1 hour ago

Home Flash News