Select Location
All Locations
State
Region
City / District
Dharwad: 16 ವರ್ಷಗಳ ಬಳಿಕ ದೇವಸ್ಥಾನದ ಬಾಗಿಲು ಓಪನ್; ಗುಂಪುಗಳ ಭಿನ್ನಾಭಿಪ್ರಾಯ ಇತ್ಯರ್ಥ

Dharwad: 16 ವರ್ಷಗಳ ಬಳಿಕ ದೇವಸ್ಥಾನದ ಬಾಗಿಲು ಓಪನ್; ಗುಂಪುಗಳ ಭಿನ್ನಾಭಿಪ್ರಾಯ ಇತ್ಯರ್ಥ

ಧಾರವಾಡ: ನವಲಗುಂದ ತಾಲೂಕಿನ ಕರ್ಲವಾಡದಲ್ಲಿ 16 ವರ್ಷಗಳಿಂದ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಎರಡು ಗುಂಪುಗಳ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಬುಧವಾರ ಸುಖಾಂತ್ಯ ಕಂಡಿದೆ. ಇದರಿಂದ ಮೇ 2ರಂದು ಜರುಗುವ ಜಾತ್ರೆಗೆ ಅಧಿಕೃತ ಚಾಲನೆ ದೊರತಿದೆ. ಗ್ರಾಮದಲ್ಲಿ 2009ರಲ್ಲಿ ನಿರ್ಮಿಸಲಾಗಿದ್ದ ಮಲ್ಲಮ್ಮ ಹಾಗೂ ಮಲ್ಲಯ್ಯ ದೇವಸ್ಥಾನ ಉದ್ಘಾಟನಾ ಸಮಾರಂಭಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಅಂದಿನಿಂದ ಎರಡು ದೇವಸ್ಥಾನಗಳು ಸರ್ಕಾರದ ಅಧೀನದಲ್ಲಿದ್ದು ದೇವಸ್ಥಾನಕ್ಕೆ ಬೀಗ ಹಾಕಲಾಗಿತ್ತು. ಪ್ರಸ್ತುತ ಗ್ರಾಮದಲ್ಲಿ ಗ್ರಾಮದೇವತೆ ದೇವಸ್ಥಾನ ಉದ್ಘಾಟನೆಗೆ ಸಂಬಂಧಿಸಿದಂತೆ ಒಂದು ಗುಂಪು ತಕರಾರು ತೆಗೆದಿತ್ತು.

ಈ ಹಿನ್ನೆಲೆ ಬುಧವಾರ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಎರಡು ಗುಂಪುಗಳ ಮಧ್ಯ ಸಂಧಾನ ಸಭೆ ನಡೆಸಿದ ಅಧಿಕಾರಿಗಳು ಅವರ ಬೇಡಿಕೆ ಪರಿಶೀಲಿಸಿ ಇತ್ಯರ್ಥಪಡಿಸಿದರು. ಗ್ರಾಮದಲ್ಲಿ ಶಾಂತಿ ನೆಲೆಸುವ ಉದ್ದೇಶದಿಂದ ಏ. 21ರಂದು ಮಲ್ಲಮ್ಮನ ಹಾಗೂ ಮಲ್ಲಯ್ಯನ ದೇವಸ್ಥಾನದ ಬಾಗಿಲು ತೆರೆಯುವುದು ಹಾಗೂ ಏ. 28ರಿಂದ ಮೇ 2ರ ವರೆಗೆ ಜರುಗಲಿರುವ ಗ್ರಾಮದೇವತೆಗಳ ಜಾತ್ರಾ ಮಹೋತ್ಸವವನ್ನು ಎರಡೂ ಗುಂಪುಗಳು ಒಟ್ಟಾಗಿ ನಡೆಸಲು ಸಭೆಯಲ್ಲಿ ಒಮ್ಮತದಿಂದ ನಿರ್ಧರಿಸಲಾಯಿತು.


Asianet News 1 hour ago
Home Flash News