Select Location
All Locations
State
Region
City / District
ಮಹಿಳಾ ಮೀಸಲಾತಿ ಹೆಸರಲ್ಲಿ ಕ್ಷೇತ್ರ ಪುನರ್‌ವಿಂಗಡಣೆಗೆ ಯತ್ನ: ಗೊಗೊಯ್

ಮಹಿಳಾ ಮೀಸಲಾತಿ ಹೆಸರಲ್ಲಿ ಕ್ಷೇತ್ರ ಪುನರ್‌ವಿಂಗಡಣೆಗೆ ಯತ್ನ: ಗೊಗೊಯ್

ನವದೆಹಲಿ: ಮಹಿಳಾ ಮೀಸಲಾತಿ ಹೆಸರಲ್ಲಿ ಸರ್ಕಾರವು ಕ್ಷೇತ್ರ ಪುನರ್‌ವಿಂಗಡಣೆ ಜಾರಿಗೊಳಿಸಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ನಿಜಕ್ಕೂ ಮಹಿಳಾ ಮೀಸಲಾತಿ ಜಾರಿಮಾಡುವ ಇಚ್ಛೆ ಇದ್ದರೆ ಸದ್ಯದ ಲೋಕಸಭಾ ಕ್ಷೇತ್ರಗಳಿಗೆ ಅನುಗುಣವಾಗಿ ಜಾರಿ ಮಾಡಲಿ ಎಂದು ಹೇಳಿದೆ. ಮಹಿಳಾ ಮೀಸಲಾತಿ ಕಾಯ್ದೆ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಆಯೋಗ ರಚನೆಗೆ ಸಂಬಂಧಿಸಿದಂತೆ ಮಂಡಿಸಲಾದ ಮೂರು ಪ್ರತ್ಯೇಕ ಮಸೂದೆಗಳ ಸಂಬಂಧ ಚರ್ಚೆಯಲ್ಲಿ ಭಾಗವಹಿಸಿದ ಲೋಕಸಭೆಯ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೊಯ್, ಈ ಮಸೂದೆಗಳು ಮಹಿಳೆ , ಜಾತಿ, ಸಂವಿಧಾನ ಮತ್ತು ದೇಶದ ಒಕ್ಕೂಟ ವ್ಯವಸ್ಥೆಯ ವಿರೋಧಿ ಎಂದು ಹೇಳಿದ್ದಾರೆ.

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಗುರುವಾರ ಸಂವಿಧಾನಕ್ಕೆ 131ನೇ ತಿದ್ದುಪಡಿ ಮಸೂದೆ ಮಂಡಿಸಲಾಯಿತು. ಇದರ ಜೊತೆಗೆ, ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಮತ್ತು ಪ್ರಸ್ತಾಪಿತ ಮಹಿಳಾ ಮೀಸಲಾತಿಯನ್ನು ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ, ಪುದುಚೇರಿ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಗೆ ತರುವ ಉದ್ದೇಶದಿಂದ ಕೇಂದ್ರಾಡಳಿತ ಪ್ರದೇಶಗಳ ತಿದ್ದುಪಡಿ ಮಸೂದೆಯನ್ನೂ ಸಹ ಮಂಡಿಸಲಾಯಿತು. ಈ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದ ಗೊಗೊಯ್, ಕೇಂದ್ರ ಸರ್ಕಾರವು ಕ್ಷೇತ್ರ ಪುನರ್‌ವಿಂಗಡಣೆ ಮೂಲಕ ರಾಜಕೀಯ ಲಾಭಕ್ಕೆ ಯತ್ನಿಸುತ್ತಿದೆ ಎಂದು ಆರೋಪಿಸಿದರು.


Prajavani 11 hours ago
Home Flash News