Select Location
All Locations
State
Region
City / District
ಈ ಸಾರಿ ಬಹುತೇಕ ಕರ್ನಾಟಕಕ್ಕೆ ಮುಂಗಾರು ಕೊರತೆ! ಸಿಎಂ ಹೈಲೆವೆಲ್ ಮೀಟಿಂಗ್

ಈ ಸಾರಿ ಬಹುತೇಕ ಕರ್ನಾಟಕಕ್ಕೆ ಮುಂಗಾರು ಕೊರತೆ! ಸಿಎಂ ಹೈಲೆವೆಲ್ ಮೀಟಿಂಗ್

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಇತರ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ವಿಧಾನಸೌಧ ಸಭಾಂಗಣದಲ್ಲಿ ಗುರುವಾರ ನಡೆಯಿತು. 114 ತಾಲ್ಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ 213 ತಾಲ್ಲೂಕುಗಳನ್ನು ಹಾಗೂ 2, 410 ಗ್ರಾಮ ಪಂಚಾಯತ್ ಗಳನ್ನು ಗುರುತಿಸಲಾಗಿದೆ. 

ಪ್ರಸ್ತುತ 114 ತಾಲ್ಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಟ್ಯಾಂಕರ್ಗಳ ಮೂಲಕ 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 585 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 515 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ.


Prajavani 9 hours ago
Home Flash News