Select Location
All Locations
State
Region
City / District
ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮುಸ್ಲಿಂ ಮಹಿಳೆಯರಿಗೆ ಕೋಟಾ ನೀಡಬೇಕೆಂಬ ಸಮಾಜವಾದಿ ಪಕ್ಷದ ಸಂಸದ ಧರ್ಮೇಂದ್ರ ಯಾದವ್‌ ಬೇಡಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಧರ್ಮದ ಆಧಾರದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸಾಧ್ಯವಿಲ್ಲ. ಅಂತಹ ಮೀಸಲಾತಿ ಸಂವಿಧಾನಬಾಹಿರ‘ ಎಂದರು.

ಲೋಕಸಭೆಯಲ್ಲಿ ಮೂರು ಮಸೂದೆಗಳ ಮಂಡನೆ ವಿರೋಧಿಸಿದ ಯಾದವ್, ‘ಈ ಮಸೂದೆಗಳು ಸಂವಿಧಾನವನ್ನು ನಾಶಪಡಿಸಲಿವೆ. ಕ್ಷೇತ್ರ ಪುನರ್‌ ವಿಂಗಡಣೆಯನ್ನು ಮಹಿಳಾ ಮೀಸಲಾತಿಯೊಂದಿಗೆ ಜೋಡಿಸುವುದು ಸಂವಿಧಾನದ ಆಶಯಕ್ಕೆ ವಿರುದ್ಧ‘ ಎಂದು ಪ್ರತಿಪಾದಿಸಿದರು. ‘ಕಾಶ್ಮೀರ ಹಾಗೂ ಅಸ್ಸಾಂನಲ್ಲಿ ಮಾಡಿದ್ದನ್ನು ಮಹಿಳಾ ಮೀಸಲಾತಿ ಹೆಸರಿನಲ್ಲಿ ಇಡೀ ದೇಶದಲ್ಲಿ ಮಾಡಲು ಸರ್ಕಾರ ಹೊರಟಿದೆ. ಇದನ್ನು ಇಡೀ ವಿರೋಧ ಪಕ್ಷಗಳು ವಿರೋಧಿಸುತ್ತವೆ. 

ಒಬಿಸಿ ಮಹಿಳೆಯರಿಗೆ, ಮುಸ್ಲಿಂ ಮಹಿಳೆಯರಿಗೆ ಯಾವುದೇ ಕೋಟಾ ಇಲ್ಲದಿದ್ದರೆ ಸಮಾಜವಾದಿ ಪಕ್ಷವು ಈ ಮಸೂದೆಯನ್ನು ಬೆಂಬಲಿಸುವುದಿಲ್ಲ ಎಂದರು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಕ್ಷಣ ಆಕ್ಷೇಪ ವ್ಯಕ್ತಪಡಿಸಿ, ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲು ಅವಕಾಶ ಇಲ್ಲ ಎಂದರು. ಮುಸ್ಲಿಂ ಮಹಿಳೆಯರ ಬಗ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಉಲ್ಲೇಖಿಸಿದಾಗ ಶಾ, ‘ಸಮಾಜವಾದಿ ಪಕ್ಷವು ತನ್ನ ಎಲ್ಲ ಟಿಕೆಟ್‌ಗಳನ್ನು ಮುಸ್ಲಿಂ ಮಹಿಳೆಯರಿಗೆ ನೀಡಿದರೆ, ನಾವು ಆಕ್ಷೇಪ ವ್ಯಕ್ತಪಡಿಸುವುದಿಲ್ಲ‘ ವ್ಯಂಗ್ಯವಾಡಿದರು.


Prajavani 1 hour ago
Home Flash News