ಹೊಸ ಸಿನಿಮಾ ಘೋಷಿಸಿದ ವಿಜಯ್ ದೇವರಕೊಂಡ; ಇದರಲ್ಲಿದ್ದಾರೆ ಹಾಲಿವುಡ್ ತಂತ್ರಜ್ಞರು
ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ‘ಹಾಯ್ ನಾನ್ನ’ ಖ್ಯಾತಿಯ ನಿರ್ದೇಶಕ ಶೌರ್ಯು ಜೊತೆ ಹೊಸ ಸಿನಿಮಾ ಘೋಷಿಸಿದ್ದಾರೆ. VDxShouryuv ಎಂದು ತಾತ್ಕಾಲಿಕ ಶೀರ್ಷಿಕೆ ಇಡಲಾಗಿದ್ದು, ಅಂತರರಾಷ್ಟ್ರೀಯ ಛಾಯಾಗ್ರಾಹಕ ಅಲೆಜಾಂಡ್ರೊ ಮಾರ್ಟಿನೆಜ್, ವಿಎಫ್‌ಎಕ್ಸ್ ಮೇಲ್ವಿಚಾರಕ ಎರಿಕ್ ಡಸ್ಟರ್ ಸೇರಿದಂತೆ ಜಾಗತಿಕ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಈ ಪೋಸ್ಟರ್ ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆ ಮೂಡಿಸಿದೆ.
ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ಸದ್ಯ ‘ರಣಬಾಲಿ’ ಚಿತ್ರದ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ. ಹೀಗಿರುವಾಗಲೇ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ‘ಹಾಯ್ ನಾನ್ನ’ ಖ್ಯಾತಿಯ ನಿರ್ದೇಶಕ ಶೌರ್ಯು ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ ಅನೌನ್ಸ್ ಆಗಿದೆ. ಈ ಬಗ್ಗೆ ಇಂದು (ಏಪ್ರಿಲ್ 18) ಅಧಿಕೃತವಾಗಿ ಘೋಷಣೆ ಆಗಿದೆ. ಈ ಚಿತ್ರದಲ್ಲಿ ಅಂತರರಾಷ್ಟ್ರೀಯ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ ಎಂಬುದು ಗಮನಾರ್ಹ.
ವೀರಾ ಬ್ಯಾನರ್ ಮೂಲಕ ವಿಜಯ್ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾ ಅನೌನ್ಸ್ ಮಾಡಲು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಪೋಸ್ಟರ್ ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆಗಳನ್ನು ಸೃಷ್ಟಿ ಮಾಡುವಂತೆ ಮಾಡಿದೆ. ‘VDxShouryuv’ ಎಂದು ಚಿತ್ರಕ್ಕೆ ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ಮುಂದಿನ ದಿನಗಳಲ್ಲಿ ಟೈಟಲ್ ಅನಾವರಣ ಆಗಲಿದೆ.