Select Location
All Locations
State
Region
City / District
ಟೀಮ್ ಇಂಡಿಯಾಗೆ 4 ಆಟಗಾರರ ಎಂಟ್ರಿ?

ಟೀಮ್ ಇಂಡಿಯಾಗೆ 4 ಆಟಗಾರರ ಎಂಟ್ರಿ?

ಐಪಿಎಲ್ 2026ರ ಬೆನ್ನಲ್ಲೇ ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ, ದೇಶೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಹೊಸ ಮುಖಗಳಿಗೆ ಅವಕಾಶ ನೀಡಲು ಬಿಸಿಸಿಐ (BCCI) ಚಿಂತಿಸುತ್ತಿದೆ. ಅದರಂತೆ ಅಫ್ಘಾನ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ನಾಲ್ವರು ಹೊಸ ಮುಖಗಳು ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆ ಐವರು ಆಟಗಾರರ ಹೆಸರು ಈ ಕೆಳಗಿನಂತಿದೆ…

ಕರ್ನಾಟಕದ ಪ್ರತಿಭಾನ್ವಿತ ಬ್ಯಾಟರ್ ದೇವದತ್ ಪಡಿಕ್ಕಲ್ ಟೆಸ್ಟ್ ತಂಡಕ್ಕೆ ಮರಳುವ ನಿರೀಕ್ಷೆಯಿದೆ. 2024ರ ಮಾರ್ಚ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಧರ್ಮಶಾಲಾದಲ್ಲಿ ನಡೆದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಪಡಿಕ್ಕಲ್, ತಮ್ಮ ಚೊಚ್ಚಲ ಪಂದ್ಯದಲ್ಲೇ ಆಕರ್ಷಕ 65 ರನ್ ಗಳಿಸಿದ್ದರು. ಅಲ್ಲದೆ ಈವರೆಗೆ 2 ಟೆಸ್ಟ್ ಪಂದ್ಯಗಳನ್ನಾಡಿರುವ ಅವರು 3 ಇನಿಂಗ್ಸ್‌ಗಳಿಂದ ಅವರು ಒಟ್ಟು 90 ರನ್ ಗಳಿಸಿದ್ದಾರೆ. ಇದೀಗ ಎರಡು ವರ್ಷಗಳ ಬಳಿಕ ಮತ್ತೊಮ್ಮೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಪ್ಲೇಆಫ್​ನಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಭಾರತ ಟೆಸ್ಟ್ ತಂಡದ ನಾಯಕ ಶುಭ್​​ಮನ್ ಗಿಲ್, ಜಸ್​ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಸೇರಿದಂತೆ ಟೆಸ್ಟ್ ತಂಡದ ಸ್ಟಾರ್ ಆಟಗಾರರು ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಐಪಿಎಲ್ ಫೈನಲ್ ಮುಗಿದ ಕೇವಲ 6 ದಿನಗಳಲ್ಲಿ ಈ ಟೆಸ್ಟ್ ಆರಂಭವಾಗುತ್ತಿರುವುದರಿಂದ ಆಟಗಾರರ ಕೆಲಸದ ಹೊರೆ ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಈ ಪಂದ್ಯವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಈ ಪಂದ್ಯದ ಫಲಿತಾಂಶವು WTC ಪಾಯಿಂಟ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ.


TV9 Kannada 12 days ago
Home Flash News